ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ತನ್ನ ಪಾಲಿನ ತವರು ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಆಡಬೇಕು ಎಂದು ಕರ್ನಾಟಕದ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮನವಿ ಮಾಡಿದ್ದಾರೆ.

2025ರ ಐಪಿಎಲ್ ಆವೃತ್ತಿಯಲ್ಲಿ ಆರ್ಸಿಬಿ ಚಾಂಪಿಯನ್ ಪಟ್ಟಕ್ಕೇರಿದ ನಂತರ ನಡೆದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಅದಾದ ನಂತರ, ಇಲ್ಲಿ ಐಪಿಎಲ್ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದಕ್ಕೆ ನಿರ್ಬಂಧ ಹೇರಲಾಗಿತ್ತು. ಅದನ್ನು, ಕರ್ನಾಟಕ ಸರ್ಕಾರವು ಇತ್ತೀಚೆಗೆ ತೆರವು ಮಾಡಿದೆ.

ಐಪಿಎಲ್ ಪಂದ್ಯಗಳ ಆಯೋಜನೆ ಕುರಿತು ಕೆಎಸ್ಸಿಎ ಅಧಿಕಾರಿಗಳು ನಗರದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ.

'ಸರ್ಕಾರದ ನಿರ್ದೇಶನಗಳಿಗೆ ಅನುಸಾರವಾಗಿ ಕ್ರೀಡಾಂಗಣ ಸಜ್ಜಾಗಿದೆ' ಎಂದಿರುವ ಪ್ರಸಾದ್, '2026ರ ಆವೃತ್ತಿಯ ಉದ್ಘಾಟನಾ ಪಂದ್ಯ ಸೇರಿದಂತೆ ತನ್ನ ಪಾಲಿನ ತವರು ಪಂದ್ಯಗಳನ್ನು ಆರ್ಸಿಬಿ ಬೆಂಗಳೂರಿನಲ್ಲೇ ಆಡಲಿ ಎಂದು ಆಶಿಸುತ್ತೇನೆ ಮತ್ತು ಮನವಿ ಮಾಡುತ್ತೇನೆ. ಫೆಬ್ರುವರಿ ಅಂತ್ಯದ ವೇಳೆಗೆ ರಾಜ್ಯ ಸರ್ಕಾರದಿಂದ ಅನುಮತಿ ಪತ್ರ ಪಡೆಯುವ ವಿಶ್ವಾಸ ನಮಗಿದೆ' ಎಂದು ಹೇಳಿದ್ದಾರೆ.

'ಚೆಂಡು ಈಗ ಆರ್ಸಿಬಿ ಅಂಗಳದಲ್ಲಿದೆ. ಆರ್ಸಿಬಿ ಈ ವಿಚಾರದಲ್ಲಿ ಗಮನ ಹರಿಸಲಿದೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಪಂದ್ಯಗಳ ಆಯೋಜನೆ ಪ್ರಕ್ರಿಯೆ ಸುಗಮವಾಗಿ ನಡೆಯಲು ರಾಜ್ಯ ಸರ್ಕಾರದೊಂದಿಗೆ ಮಾತುಕತೆ ನಡೆಸಿ, ತೀರ್ಮಾನ ಕೈಗೊಳ್ಳಬೇಕಿದೆ' ಎಂದು ಅಧಿಕಾರಿಗಳು ಹೇಳಿದ್ದಾರೆ.

'ಬೆಂಗಳೂರಿನ ಅಭಿಮಾನಿಗಳಿಂದಲೇ ಅವರು (ಆರ್ಸಿಬಿ) ಬೆಳೆದಿರುವುದು. ಹಾಗಾಗಿ, ಇಲ್ಲಿಗೆ ಮರಳುವುದು ಹಾಗೂ ಪಂದ್ಯಗಳನ್ನು ಆಡುವುದು ಅವರ ಜವಾಬ್ದಾರಿ' ಎಂದೂ ಪ್ರತಿಪಾದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.