ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಪುನರಾರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಸೆಪ್ಟೆಂಬರ್ 19ರಂದು ಈ ಪಂದ್ಯ ನಡೆಯಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಭಾನುವಾರ ತಿಳಿಸಿದೆ.

ಟೂರ್ನಿಗಾಗಿ ರಚಿಸಲಾದ ಬಯೋಬಬಲ್‌ನಲ್ಲಿ ಕೋವಿಡ್ ಪ್ರಕರಣಗಳು ದೃಢಪಟ್ಟ ಕಾರಣ ಮೇನಲ್ಲಿ ಟೂರ್ನಿಯನ್ನು ಸ್ಥಗಿತಗೊಳಿಸಲಾಗಿತ್ತು.

‘ಕೋವಿಡ್ ಪಿಡುಗಿನ ಹಿನ್ನೆಲೆಯಲ್ಲಿ ಈ ವರ್ಷದ ಮೇನಲ್ಲಿ ಮುಂದೂಡಲ್ಪಟ್ಟ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಸೆಪ್ಟೆಂಬರ್ 19ರಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದೊಂದಿಗೆ ದುಬೈನಲ್ಲಿ ಪುನರಾರಂಭಗೊಳ್ಳಲಿದೆ‘ ಎಂದು ಬಿಸಿಸಿಐ ಹೇಳಿದೆ.

27 ದಿನಗಳ ಅವಧಿಯಲ್ಲಿ 31 ಪಂದ್ಯಗಳು ನಡೆಯಲಿದ್ದು, ಅದರಲ್ಲಿ ಏಳು ಡಬಲ್ ಹೆಡರ್ (ದಿನಕ್ಕೆ ಎರಡು ಪಂದ್ಯಗಳು) ಇರಲಿವೆ. ಸೆಪ್ಟೆಂಬರ್ 20ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಅಬುಧಾಬಿಯಲ್ಲಿ ಸೆಣಸಲಿವೆ.

ಅಕ್ಟೋಬರ್ 8ರಂದು ಕೊನೆಯ ಲೀಗ್ ಪಂದ್ಯ ನಡೆಯಲಿದೆ. ಅಕ್ಟೋಬರ್ 10ರಂದು ಮೊದಲ ಕ್ವಾಲಿಫೈಯರ್, ಅಕ್ಟೋಬರ್ 11 ಮತ್ತು 13ರಂದುಕ್ರಮವಾಗಿ ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್ ಪಂದ್ಯಗಳು ನಿಗದಿಯಾಗಿವೆ. ಅಕ್ಟೋಬರ್ 15ರಂದು ಫೈನಲ್ ಪಂದ್ಯ ದುಬೈನಲ್ಲಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.