ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿಯು ನಂದಿನಿ ಉತ್ಪನ್ನಗಳ ಪ್ರಚಾರದ ಭಾಗವಾಗಿ ಐಪಿಎಲ್–2026 ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಪ್ರಾಯೋಜಕತ್ವ ವಹಿಸಲಿದೆ.

ಎರಡು ವರ್ಷದ ಹಿಂದೆ ಸ್ಕಾಟ್ಲೆಂಡ್, ಐರ್ಲೆಂಡ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿತ್ತು. ಈ ಬಾರಿ ಆರ್ಸಿಬಿ ತಂಡದ ಅಧಿಕೃತ ಪಾಲುದಾರರಾಗಿ ಕಾರ್ಯನಿರ್ವಹಿಸಲಿದ್ದು, ಇದಕ್ಕಾಗಿ ₹4.80 ಕೋಟಿ ವಿನಿಯೋಗ ಮಾಡಲಿದೆ.

‘ನಂದಿನಿ ಬ್ರ್ಯಾಂಡ್ ಕ್ರೀಡೆ ಮತ್ತು ಯುವಜನರನ್ನು ಪ್ರೋತ್ಸಾಹಿಸುವ ಧ್ಯೇಯ ಹೊಂದಿದೆ. ಕರ್ನಾಟಕದ ಹೆಮ್ಮೆಯ ಎರಡು ಪ್ರತಿಷ್ಠಿತ ಬ್ರ್ಯಾಂಡ್ಗಳಾದ ‘ನಂದಿನಿ’ ಮತ್ತು ‘ಆರ್ಸಿಬಿ’ ಒಂದಾಗಿರುವುದು ಸಂತೋಷದ ವಿಷಯ. ಆರ್ಸಿಬಿ ಅಭಿಮಾನಿಗಳೊಂದಿಗೆ ನಂಟನ್ನು ವಿಸ್ತರಿಸಿ ಲೀಗ್ನಲ್ಲಿ ಸಂಭ್ರಮಿಸಲು ಎದುರು ನೋಡುತ್ತಿದ್ದೇವೆ’ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ತಿಳಿಸಿದ್ದಾರೆ.

‘ಐಪಿಎಲ್ 2026ರ ಟಿ20 ಲೀಗ್ ಮಾರ್ಚ್ 28ರಿಂದ ಆರಂಭವಾಗಲಿದೆ. ನಂದಿನಿ ಬ್ರ್ಯಾಂಡ್ನ ಯಾವುದೇ ಜಾಹೀರಾತು ಕ್ರೀಡಾಂಗಣದಲ್ಲಿ ಪ್ರಕಟವಾಗುವುದಿಲ್ಲ. ಆಟಗಾರರ ಜರ್ಸಿಗಳ ಮೇಲೂ ನಂದಿನಿ ಲಾಂಛನ ಇರುವುದಿಲ್ಲ. ಬದಲಿಗೆ ನಂದಿನಿ ಉತ್ಪನ್ನಗಳ ಜಾಹೀರಾತಿನಲ್ಲಿ ಆರ್ಸಿಬಿ ಆಟಗಾರರಾದ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ದೇವದತ್ತ ಪಡಿಕಲ್ ಅವರ ಭಾವಚಿತ್ರ ಬಳಸಿಕೊಳ್ಳಲು ಅವಕಾಶ ಇರಲಿದೆ’ ಎಂದು ಹೇಳಿದ್ದಾರೆ.

‘ಕರ್ನಾಟಕದ ಮಣ್ಣಿನೊಡನೆ ಬಾಂಧವ್ಯ ಹೊಂದಿರುವ ಎರಡೂ ಬ್ರ್ಯಾಂಡ್ಗಳು ಒಂದಾಗಿರುವುದು ವಿಶೇಷ. ನಂದಿನಿಯ ವಿಶ್ವಾಸಾರ್ಹತೆ ಈ ಸಹಭಾಗಿತ್ವವನ್ನು ಮತ್ತಷ್ಟು ಅರ್ಥಪೂರ್ಣವಾಗಿಸಲಿದೆ’ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಮೆನನ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.