ಶನಿವಾರ, ಅಕ್ಟೋಬರ್ 31, 2020
20 °C

IPL-2020 | RCB vs RR: ಟಾಸ್‌ ಗೆದ್ದ ರಾಯಲ್ಸ್‌; ಬ್ಯಾಟಿಂಗ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ: ಐಪಿಎಲ್‌ ಟೂರ್ನಿಯ 33ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದಿರುವ ರಾಯಲ್ಸ್‌ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ಮೊದಲ ಸುತ್ತಿನಲ್ಲಿ ರಾಯಲ್ಸ್‌ ಎದುರು ಜಯಿಸಿದ್ದ ಕೊಹ್ಲಿ ಪಡೆಯು ಈಗಲೂ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಆರ್‌ಸಿಬಿಯು ಎಂಟು ಪಂದ್ಯಗಳನ್ನು ಆಡಿ ಐದು ಪಂದ್ಯಗಳನ್ನು ಗೆದ್ದಿದೆ.

ಎಂಟು ಪಂದ್ಯಗಳಲ್ಲಿ ಐದರಲ್ಲಿ ಸೋತು, ಮೂರರಲ್ಲಿ ಮಾತ್ರ ಗೆದ್ದಿರುವ ಸ್ಮಿತ್ ಬಳಗವು ಪ್ಲೇ ಆಫ್ ಹಂತಕ್ಕೆ ತಲುಪಬೇಕಾದರೆ ಉಳಿದಿರುವ ಪಂದ್ಯಗಳಲ್ಲಿ ಜಯ ಗಳಿಸುವ ಒತ್ತಡದಲ್ಲಿದೆ. ಆದ್ದರಿಂದ ತನ್ನ ಸಕಲ ಸಾಮರ್ಥ್ಯವನ್ನು ಪಣಕ್ಕೊಡ್ಡಿ ಹೋರಾಡುವುದು ಖಚಿತ. ಹೀಗಾಗಿ ರೋಚಕ ಕದನ ಏರ್ಪಡುವುದು ಕೂಡ ನಿರೀಕ್ಷಿತ.

ರಾಜಸ್ಥಾನ ತಂಡದಲ್ಲಿ ಸಂಜು ಸ್ಯಾಮ್ಸನ್, ಸ್ಟೀವ್ ಸ್ಮಿತ್, ಬೆನ್ ಸ್ಟೋಕ್ಸ್‌, ರಾಹುಲ್ ತೆವಾಟಿಯಾ ಮತ್ತು ರಿಯಾನ್ ಪರಾಗ್ ಅವರಂತಹ ಬಿರುಸಿನ ಆಟವಾಡುವ ಬ್ಯಾಟ್ಸ್‌ಮನ್‌ಗಳಿದ್ದಾರೆ.

ರಾಯಲ್ಸ್‌ನ ವೇಗಿ ಜೋಫ್ರಾ ಆರ್ಚರ್‌, ಜಯದೇವ್ ಉನದ್ಕತ್ ಮತ್ತು  ಸ್ಪಿನ್ನರ್ ಶ್ರೇಯಸ್ ಗೋಪಾಲ್ ಅವರ ಎಸೆತಗಳನ್ನು ಎದುರಿಸಿ ಉತ್ತಮ ಜೊತೆಯಾಟಗಳನ್ನು ಆಡಿದರೆ ಮಾತ್ರ ಆರ್‌ಸಿಬಿ ದೊಡ್ಡ ಮೊತ್ತ ಗಳಿಸಲು ಸಾಧ್ಯವಾಗಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು