ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಸಿಬಿ ತಂಡಕ್ಕೆ ಕೇದಾರ್‌ ಜಾಧವ್‌

Published 1 ಮೇ 2023, 19:13 IST
Last Updated 1 ಮೇ 2023, 19:13 IST
ಅಕ್ಷರ ಗಾತ್ರ

ನವದೆಹಲಿ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಐಪಿಎಲ್‌ನ ಇನ್ನುಳಿದ ಪಂದ್ಯಗಳಿಗೆ ಡೇವಿಡ್‌ ವಿಲಿ ಅವರಿಗೆ ಬದಲಿ ಆಟಗಾರನಾಗಿ ಆಲ್‌ರೌಂಡರ್‌ ಕೇದಾರ್‌ ಜಾಧವ್‌ಗೆ ಸ್ಥಾನ ನೀಡಿದೆ.

ಇಂಗ್ಲೆಂಡ್‌ನ ಆಲ್‌ರೌಂಡರ್‌ ವಿಲಿ ಅವರು ಕೋಲ್ಕತ್ತ ನೈಟ್‌ ರೈಡರ್ಸ್‌ ವಿರುದ್ಧದ ಹಿಂದಿನ ಪಂದ್ಯದಲ್ಲಿ ಬ್ಯಾಟಿಂಗ್‌ ವೇಳೆ ಗಾಯಗೊಂಡಿದ್ದು, ಇನ್ನುಳಿದ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಈ ಋತುವಿನಲ್ಲಿ ನಾಲ್ಕು ಪಂದ್ಯಗಳನ್ನು ಆಡಿರುವ ಅವರು ಮೂರು ವಿಕೆಟ್‌ ಪಡೆದಿದ್ದಾರೆ.

2010 ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ಜಾಧವ್‌, ಈ ಬಾರಿಯ ಹರಾಜಿನಲ್ಲಿ ಯಾವುದೇ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಇದೀಗ ಅವರನ್ನು ₹ 1 ಕೋಟಿ ಮೂಲ ಬೆಲೆಗೆ ಆರ್‌ಸಿಬಿ ತನ್ನ ತಂಡಕ್ಕೆ ಸೇರಿಸಿಕೊಂಡಿದೆ.

38 ವರ್ಷದ ಅನುಭವಿ ಆಟಗಾರ ಜಾಧವ್‌, 93 ಐಪಿಎಲ್‌ ಪಂದ್ಯಗಳಿಂದ 1,196 ರನ್ ಗಳಿಸಿದ್ದಾರೆ. ಆರ್‌ಸಿಬಿ ತಂಡದ ಪರ 17 ಪಂದ್ಯಗಳನ್ನು ಆಡಿದ್ದರು.

ರಾಷ್ಟ್ರೀಯ ತಂಡದ ಪರ 73 ಏಕದಿನ ಪಂದ್ಯಗಳನ್ನು ಆಡಿದ್ದು, 1,389 ರನ್ ಗಳಿಸಿದ್ದಲ್ಲದೆ 27 ವಿಕೆಟ್‌ಗಳನ್ನು ಪಡೆದಿದ್ದಾರೆ. 9 ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ 58 ರನ್‌ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT