ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿಯು ನಂದಿನಿ ಉತ್ಪನ್ನಗಳ ಪ್ರಚಾರದ ಭಾಗವಾಗಿ ಐಪಿಎಲ್–2026 ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು( ಆರ್ಸಿಬಿ) ತಂಡಕ್ಕೆ ಪ್ರಾಯೋಜಕತ್ವ ನೀಡಿದೆ.

ಎರಡು ವರ್ಷದ ಹಿಂದೆ ಸ್ಕಾಟ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿತ್ತು. ಈ ಬಾರಿ ಆರ್ಸಿಬಿ ತಂಡದ ಅಧಿಕೃತ ಡೈರಿ ಪಾಲುದಾರ ಆಗಿ ಕಾರ್ಯನಿರ್ವಹಿಸಲಿದ್ದು, ಇದಕ್ಕಾಗಿ ₹4.80 ಕೋಟಿ ವಿನಿಯೋಗ ಮಾಡಲಿದೆ.

‘ನಂದಿನಿ ಬ್ರಾಂಡ್ ಕ್ರೀಡೆ ಮತ್ತು ಯುವಜನತೆಯನ್ನು ಪ್ರೋತ್ಸಾಹಿಸುವ ಧ್ಯೇಯ ಹೊಂದಿದೆ. ಕರ್ನಾಟಕದ ಹೆಮ್ಮೆಯ ಎರಡು ಪ್ರತಿಷ್ಠಿತ ಬ್ರ್ಯಾಂಡ್ಗಳಾದ ‘ನಂದಿನಿ ಮತ್ತು ಆರ್ಸಿಬಿ’ ಒಂದಾಗಿರುವುದು ಸಂತೋಷದ ವಿಷಯ. ಆರ್ಸಿಬಿ ಅಭಿಮಾನಿಗಳೊಂದಿಗೆ ನಂಟನ್ನು ವಿಸ್ತರಿಸಿ ಲೀಗ್ನ ಉತ್ಸಾಹ ಸಂಭ್ರಮಿಸಲು ಎದುರು ನೋಡುತ್ತಿದ್ದೇವೆ’ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ತಿಳಿಸಿದ್ದಾರೆ.

‘ಐಪಿಎಲ್ 2026ರ ಟಿ20 ಲೀಗ್ ಮಾರ್ಚ್ 28ರಿಂದ ಆರಂಭವಾಗಲಿದೆ. ನಂದಿನಿ ಬ್ರಾಂಡ್ನ ಯಾವುದೇ ಜಾಹೀರಾತುಗಳು ಕ್ರೀಡಾಂಗಣದಲ್ಲಿ ಪ್ರಕಟವಾಗುವುದಿಲ್ಲ. ಆಟಗಾರರ ಜರ್ಸಿಗಳ ಮೇಲೂ ನಂದಿನಿ ಲೋಗೋ ಇರುವುದಿಲ್ಲ. ಬದಲಿಗೆ ನಂದಿನಿ ಉತ್ಪನ್ನಗಳ ಜಾಹೀರಾತಿನಲ್ಲಿ ಆರ್ಸಿಬಿ ಆಟಗಾರರಾದ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್ ಮತ್ತು ದೇವದತ್ ಪಡಿಕಲ್ ಅವರ ಭಾವಚಿತ್ರ ಬಳಸಿಕೊಳ್ಳಲು ಅವಕಾಶವಿರಲಿದೆ’ ಎಂದು ಹೇಳಿದ್ದಾರೆ.

‘ಕರ್ನಾಟಕದ ಮಣ್ಣಿನೊಡನೆ ಬಾಂಧವ್ಯ ಹೊಂದಿರುವ ಎರಡೂ ಬ್ರ್ಯಾಂಡ್ಗಳು ಒಂದಾಗಿರುವುದು ವಿಶೇಷ

ಸಂಗತಿ. ನಂದಿನಿಯ ವಿಶ್ವಾಸಾರ್ಹತೆ ಈ ಸಹಭಾಗಿತ್ವವನ್ನು ಮತ್ತಷ್ಟು ಅರ್ಥಪೂರ್ಣವಾಗಿಸಲಿದೆ’ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಮೆನನ್ ತಿಳಿಸಿದ್ದಾರೆ.

ನಂದಿನಿ ಹಾಲು ಮಾರಾಟದಲ್ಲಿ ಅಲ್ಪ ವ್ಯತ್ಯಯ

ಎಲ್ಪಿಜಿ ಸಿಲಿಂಡರ್ ಕೊರತೆಯ ಪರಿಣಾಮ ಹೋಟೆಲ್ ಉದ್ಯಮ ಜತೆಗೆ ಕರ್ನಾಟಕ ಹಾಲು ಮಹಾಮಂಡಳಿಯ ಹಾಲು ಮಾರಾಟದ ಮೇಲೂ ಆಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ವಾಣಿಜ್ಯ ಸಿಲಿಂಡರ್ ಸರಬರಾಜು ಆಗದೇ ಹೋಟೆಲ್ಗಳನ್ನು ಬಂದ್ ಮಾಡಲಾಗಿದೆ. ದೊಡ್ಡ, ಸಣ್ಣ ಹೋಟೆಲ್ಗಳ ವಹಿವಾಟು ಸ್ಥಗಿತಗೊಂಡಿದೆ.

ಹೋಟೆಲ್ಗಳು ಬಾಗಿಲು ಮುಚ್ಚಿರುವುದರಿಂದ ನಿತ್ಯ ಆಗುತ್ತಿದ್ದ ಹಾಲಿನ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಮೊಸರು, ತುಪ್ಪದ ಸರಬರಾಜಿನಲ್ಲೂ ಅಲ್ಪ ಪ್ರಮಾಣದ ಕುಸಿತ ಕಂಡಿದೆ.

ಬೆಂಗಳೂರಿನಲ್ಲಿಯೇ ನಿತ್ಯ 21ರಿಂದ 22 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟವಾಗುತ್ತಿದೆ. ಕರ್ನಾಟಕದಲ್ಲಿ ಈ ಪ್ರಮಾಣ 48 ಲಕ್ಷ ಲೀಟರ್ ನಷ್ಟಿದೆ. ಸಿಲಿಂಡರ್ ವ್ಯತ್ಯಯದಿಂದ ನಿತ್ಯ 60 ಸಾವಿರ ಲೀಟರ್ ಹಾಲಿನ ಬೇಡಿಕೆ ಕಡಿಮೆಯಾಗಿದೆ. ಆದರೆ ನಾವು ಉತ್ಪಾದನೆಯಲ್ಲಿ ಕಡಿಮೆ ಮಾಡಿಲ್ಲ. ಇತರೆಡೆ ಮಾರಾಟಕ್ಕೆ ಒತ್ತು ನೀಡಿದ್ದೇವೆ’ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.