ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟರ್ಗಳಾದ ಟಿಮ್ ಡೇವಿಡ್ ಹಾಗೂ ರೊಮಾರಿಯೊ ಶೆಫರ್ಡ್ ಅವರು ದೆಹಲಿಯ ಬೀದಿಯಲ್ಲಿ ಕ್ರಿಕೆಟ್ ಆಡಿದ್ದಾರೆ.

ಆರ್ಸಿಬಿ ಆಟಗಾರರು ‘ಗಲ್ಲಿ ಕ್ರಿಕೆಟ್’ ಆಡುತ್ತಿರುವ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಮಧ್ಯಮ ಹಾಗೂ ಕೆಳ ಕ್ರಮಾಂಕದಲ್ಲಿ ಆರ್ಸಿಬಿಯ ಬ್ಯಾಟಿಂಗ್ ಶಕ್ತಿಯಾಗಿರುವ ಡೇವಿಡ್ ಮತ್ತು ಶೆಫರ್ಡ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮುನ್ನಾದಿನ ವಸಂತ್ ಕುಂಜ್ ಪ್ರದೇಶದಲ್ಲಿ ಕ್ರಿಕೆಟ್ ಆಡಿದ್ದಾರೆ ಎನ್ನಲಾಗುತ್ತಿದೆ. ಈ ವಿಡಿಯೊಗೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

ಆರ್ಸಿಬಿಗೆ ಜಯ

ನವದೆಹಲಿಯ ಅರುಣ್ ಚೇಟ್ಲಿ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಪಂದ್ಯದಲ್ಲಿ ಡೆಲ್ಲಿ ಎದುರು ಆರ್ಸಿಬಿ 9 ವಿಕೆಟ್ ಅಂತರದ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿ, 75 ರನ್ ಗಳಿಸುವಷ್ಟರಲ್ಲೇ ಆಲೌಟ್ ಆಯಿತು.

ಈ ಅಲ್ಪ ಮೊತ್ತ ಬೆನ್ನತ್ತಿದ ಆರ್ಸಿಬಿ ಕೇವಲ 1 ವಿಕೆಟ್ ಕಳೆದುಕೊಂಡು 6.3 ಓವರ್ಗಳಲ್ಲೇ 77 ರನ್ ಗಳಿಸಿ ಜಯದ ನಗೆ ಬೀರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.