ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್(ಎಸ್ಆರ್ಎಚ್) ತಂಡವು 20 ಓವರ್ಗಳ ಅಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿದೆ.

ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗೆಲುವು ಸಾಧಿಸಲು, ಆರ್ಸಿಬಿ ತಂಡವು 256 ರನ್ ಗಳಿಸಬೇಕಿದೆ.

ಎಸ್ಆರ್ಎಚ್ ಬ್ಯಾಟರ್ಗಳು ಆರಂಭದಿಂದಲೇ ಸ್ಪೋಟಕ ಆಟಕ್ಕೆ ಒತ್ತು ನೀಡಿದರು. ಟ್ರಾವಿಸ್ ಹೆಡ್ 16 ಎಸೆತಗಳಲ್ಲಿ 26 ರನ್ ಗಳಿಸಿ ರಸಿಕ್ ಸಲಾಂ ದಾರ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

ಅಭಿಷೇಕ್ ಶರ್ಮಾ ಕೇವಲ 22 ಎಸೆತಗಳಲ್ಲಿ 4 ಬೌಂಡರಿ, 5 ಸಿಕ್ಸರ್ ಸಹಿತ 56 ರನ್ ಗಳಿಸಿ ಔಟಾದರೆ, ಹೆನ್ರಿಕ್ ಕ್ಲಾಸೆನ್ ಅವರು 24 ಎಸೆತಗಳಲ್ಲಿ 2 ಬೌಂಡರಿ, 5 ಸಿಕ್ಸರ್ ಸಹಿತ 51 ರನ್ ಗಳಿಸಿ ಕೃಣಾಲ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು.

ಇಶಾನ್ ಕಿಶನ್ (79 ರನ್: 46 ಎಸೆತ) ಹಾಗೂ ನಿತೀಶ್ ಕುಮಾರ್ ರೆಡ್ಡಿ (29 ರನ್: 12 ಎಸೆತ) ತಂಡದ ಮೊತ್ತವನ್ನು 250ರ ಗಡಿ ದಾಟಿಸಿದರು.

ಆರ್ಸಿಬಿ ಪರ ರಸಿಕ್ ಸಲಾಂ ದಾರ್ 2 ವಿಕೆಟ್ ಪಡೆದರು. ಎಲ್ಲಾ ಬೌಲರ್ಗಳು ದುಬಾರಿಯಾದರು.

ಎರಡೂ ತಂಡಗಳು ಈಗಾಗಲೇ ಪ್ಲೇ–ಆಫ್ ಪ್ರವೇಶಿಸಿದ್ದು, ಎಸ್ಆರ್ಎಚ್ ತಂಡವು ಈ ಪಂದ್ಯವನ್ನು ಉತ್ತಮ ರನ್ರೇಟ್ನಲ್ಲಿ ಗೆದ್ದರೆ ಅಗ್ರ–2ರಲ್ಲಿ ಸ್ಥಾನ ಪಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.