ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಜಯಗಳಿಸಿ ಕಪ್ ಗೆದ್ದಿರುವ ಆರ್ಸಿಬಿಗೆ ಅದ್ದೂರಿ ಸ್ವಾಗತ ಕೋರಲು ತವರು ನೆಲ ಬೆಂಗಳೂರು ಸಜ್ಜಾಗಿದೆ.

ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಆರ್ಸಿಬಿ ತಂಡದ ವಿಜಯದ ಮೆರವಣಿಗೆ ಜೂನ್ 4 (ಇಂದು) ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.

ವಿಜಯೋತ್ಸವದ ಮೆರವಣಿಗೆಯು ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಹಾಟ್ಸ್ಟಾರ್ನಲ್ಲಿ ನೇರಪ್ರಸಾರವಾಗಲಿದೆ

ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮಂಗಳವಾರ ರಾತ್ರಿ ನಡೆದ ಫೈನಲ್ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಕಿಂಗ್ಸ್, 7 ವಿಕೆಟ್ಗೆ 184 ರನ್ ಗಳಿಸಿ ಅಲ್ಪ ಅಂತರದ ಸೋಲೊಪ್ಪಿಕೊಂಡಿತು.

ಈ ಮೂಲಕ ಐಪಿಎಲ್ ಟೂರ್ನಿ 2008ರಲ್ಲಿ ಆರಂಭವಾದಾಗಿನಿಂದಲೂ ಆರ್ಸಿಬಿ 'ಕಪ್'ಗಾಗಿ ಕಾದಿದ್ದ ಕೋಟ್ಯಂತರ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.