ಅಹಮದಾಬಾದ್: 2025ರಲ್ಲಿ ಆರ್ಸಿಬಿ ಚೊಚ್ಚಲ ಟ್ರೋಫಿ ಗೆದ್ದ ಬಳಿಕ ಬೆಂಗಳೂರಿನಲ್ಲಿ ವಿಜಯೋತ್ಸವದ ಸಂಭ್ರಮದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ, 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ, ಈ ಬಾರಿ ಆರ್ಸಿಬಿ ಚಾಂಪಿಯನ್ ಆಗಿದ್ದರೂ ನಗರದಲ್ಲಿ ವಿಜಯೋತ್ಸವದ ಮೆರವಣಿಗೆ ನಡೆಸದಿರಲು ಆರ್ಸಿಬಿ ಫ್ರಾಂಚೈಸಿ ನಿರ್ಧರಿಸಿದೆ.

ಭಾನುವಾರ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸತತ 2ನೇ ಐಪಿಎಲ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ.

ಜೂನ್ 3ರಂದು ಕರ್ನಾಟದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಇರುವುದರಿಂದ, ಆ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಭಾಗವಹಿಸುವುದರಿಂದ ಪೊಲೀಸರು ಹೆಚ್ಚುವರಿ ಭದ್ರತೆ ಒದಗಿಸಬೇಕಾಗುತ್ತದೆ. ಎರಡು ಕಾರ್ಯಕ್ರಮಗಳಿಗೆ ಭದ್ರತೆ ನೀಡಲು ಪೊಲೀಸ್ ಇಲಾಖೆಗೆ ಕಷ್ಟವಾಗಬಹುದು ಎಂದು ಫ್ರಾಂಚೈಸಿಯು ಈ ನಿರ್ಧಾರ ತೆಗೆದುಕೊಂಡಿದೆ.

'ಬೆಂಗಳೂರಿನಲ್ಲಿ ಆರ್ಸಿಬಿ ಸಂಭ್ರಮಾಚರಣೆಗೆ ಸಂಬಂಧಿಸಿದ ಯಾವುದೇ ಚಟುವಟಿಕೆಗಳು ನಡೆಯುವ ಸಾಧ್ಯತೆ ಕಡಿಮೆ. ಪೊಲೀಸ್ ಇಲಾಖೆ ಈಗಾಗಲೆ, ಕೆಲವು ಮಾರ್ಗಸೂಚಿಗಳು ಜಾರಿಗೊಳಿಸಿದೆ. ನಾವು ಅವುಗಳಿಗೆ ಬದ್ಧರಾಗಿದ್ದೇವೆ’ ಎಂದು ಆರ್ಸಿಬಿ ಮೂಲವೊಂದು ಪಿಟಿಐಗೆ ತಿಳಿಸಿದೆ.

ಪೊಲೀಸ್ ಇಲಾಖೆಯ ಮಾರ್ಗಸೂಚಿ

ಆರ್ಸಿಬಿ ತಂಡವು ಐಪಿಎಲ್ ಫೈನಲ್ ಗೆದ್ದರೆ, ಪಟಾಕಿ ಸಿಡಿಸುವುದು, ರಸ್ತೆಗಳಲ್ಲಿ ಸಂಭ್ರಮಾಚರಣೆ ನಡೆಸುವುದು, ಗೊಂದಲ ಸೃಷ್ಟಿಸುವುದು ಅಥವಾ ಜಗಳದಲ್ಲಿ ತೊಡಗುವುದನ್ನು ತಪ್ಪಿಸುವಂತೆ ಬೆಂಗಳೂರು ನಗರ ಪೊಲೀಸರು ಶುಕ್ರವಾರ ಸಾರ್ವಜನಿಕರಿಗೆ ಸಲಹೆ ನೀಡಿದ್ದರು.

‘ನಾವು ಯಾವುದೇ ಸಾರ್ವಜನಿಕ ಆಚರಣೆಗಳಿಗೆ ಅವಕಾಶ ನೀಡುವುದಿಲ್ಲ. ಯಾರಾದರೂ ಆಚರಿಸಲು ಬಯಸಿದರೆ ಮೈದಾನದ ಒಳಗೆ ಮಾತ್ರ ಮಾಡಬಹುದು’ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದರು.

ಇದಲ್ಲದೆ, ಆರ್ಸಿಬಿ ಅಗ್ರ ಕ್ರಮಾಂಕದ ಬ್ಯಾಟರ್ ದೇವದತ್ತ ಪಡಿಕ್ಕಲ್ ಅವರು ಅಫ್ಗಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದು, ಅವರು ಬುಧವಾರದೊಳಗೆ ಮುಲ್ಲನ್ಪುರದಲ್ಲಿ ಭಾರತ ತಂಡವನ್ನು ಕೂಡಿಕೊಳ್ಳಬೇಕು. ವಿದೇಶಿ ಆಟಗಾರರಾದ, ಜೋಶ್ ಹೇಜಲ್ವುಡ್, ಟಿಮ್ ಡೇವಿಡ್, ಜೇಕಬ್ ಡಫಿ, ರೊಮಾರಿಯೊ ಶೆಫರ್ಡ್ ತವರಿಗೆ ಮರಳಬೇಕಿದೆ. ಹಾಗಾಗಿ, ತಡವಾಗಿಯೂ ಸಂಭ್ರಮಾಚರಣೆ ನಡೆಯುವುದು ಅನುಮಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.