ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯ ಇಂದಿನ (ಏಪ್ರಿಲ್ 18) ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಲ್ಲಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗುತ್ತಿವೆ.

ಟೂರ್ನಿಯ ಬಲಿಷ್ಠ ತಂಡವಾಗಿರುವ ಆರ್ಸಿಬಿ ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು 1 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ 4 ಪಂದ್ಯಗಳಿಂದ 2 ಗೆಲುವು ಹಾಗೂ 2 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

ಉಭಯ ತಂಡಗಳ ಬಲಾಬಲ

ಆರ್ಸಿಬಿ ತಂಡವು ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಬಲಿಷ್ಠವಾಗಿದೆ. ವಿಶೇಷವಾಗಿ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಫಿಲ್ ಸಾಲ್ಟ್, ದೇವದತ್ತ ಪಡಿಕ್ಕಲ್, ಟಿಮ್ ಡೇವಿಡ್ ಅಮೋಘ ಲಯದಲ್ಲಿದ್ದಾರೆ. ಇನ್ನೂ ಬೌಲಿಂಗ್ನಲ್ಲಿ ಕೂಡ ಜೋಶ್ ಹೇಜಲ್ವುಡ್ ಕಳೆದ ಪಂದ್ಯದಲ್ಲಿ ಲಯಕ್ಕೆ ಮರಳಿದ್ದಾರೆ. ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ ಹಾಗೂ ಕೃಣಾಲ್ ಪಾಂಡ್ಯ ಸಂದರ್ಭಕ್ಕೆ ತಕ್ಕಂತೆ ಬೌಲಿಂಗ್ನಲ್ಲಿ ಯಶಸ್ವಿಯಾಗುತ್ತಿದ್ದಾರೆ. ಆದರೆ, ವಿಕೆಟ್ ಕೀಪರ್ ಜಿತೇಶ್ ಶರ್ಮಾ ರನ್ ಗಳಿಸಲು ಪರದಾಡುತ್ತಿರುವುದು ಆರ್ಸಿಬಿ ತಲೆನೋವು ತಂದಿದೆ

ಡೆಲ್ಲಿ ತಂಡದ ಬಲ

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕನ್ನಡಿಗ ಕೆ.ಎಲ್. ರಾಹುಲ್ ಅವರೇ ಶಕ್ತಿ. ಇವರ ಜೊತೆಗೆ ಬ್ಯಾಟಿಂಗ್ನಲ್ಲಿ ಪತುಮ್ ನಿಸ್ಸಾಂಕ, ಸಮೀರ್ ರಿಜ್ವಿ ಹಾಗೂ ಟ್ರಿಸ್ಟನ್ ಸ್ಟಬ್ಸ್ ಹಾಗೂ ಡೇವಿಡ್ ಮಿಲ್ಲರ್ ಅರಂತಹ ಸ್ಫೋಟಕ ಫಿನಿಷರ್ಗಳು ತಂಡದಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಲುಂಗಿ ಎನ್ಗಿಡಿ, ಕುಲದೀಪ್ ಯಾದವ್, ಟಿ. ನಟರಾಜನ್ ರಂತಹ ಬೌಲರ್ಗಳಿದ್ದು ಗಮನಾರ್ಹ ಪ್ರದರ್ಶನ ತೋರುತ್ತಿದ್ದಾರೆ.

ಡೆಲ್ಲಿ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಎಡವುತ್ತಿದ್ದಾರೆ. ಇವರ ಜೊತೆಗೆ ನಿತೀಶ್ ರಾಣಾ ಕೂಡ ಕಳಪೆ ಪ್ರದರ್ಶನ ನೀಡುತ್ತಿರುವುದು ತಂಡಕ್ಕೆ ಹಿನ್ನಡೆಯಾಗಿದೆ.

ಡಿಸಿ vs ಆರ್ಸಿಬಿ ಹೆಡ್ ಟು ಹೆಡ್

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಆರ್ಸಿಬಿ ಹಾಗೂ ಡೆಲ್ಲಿ ತಂಡಗಳು ಇದುವರೆಗೆ 33 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್ಸಿಬಿ 20 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಡೆಲ್ಲಿ 12 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನೊಂದು ಪಂದ್ಯ ರದ್ದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.