ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಹ್ಲಿ 900 ಟಿ20 ಬೌಂಡರಿ, ಐಪಿಎಲ್ 2021ರಲ್ಲಿ ಮ್ಯಾಕ್ಸ್‌ವೆಲ್ 500 ರನ್ ಸಾಧನೆ

Last Updated 11 ಅಕ್ಟೋಬರ್ 2021, 16:25 IST
ಅಕ್ಷರ ಗಾತ್ರ

ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸಿರಬಹುದು.

ಆದರೆ ಟಿ20 ಕ್ರಿಕೆಟ್ ಮಾದರಿಯಲ್ಲಿ ನಾಯಕ ವಿರಾಟ್ ಕೊಹ್ಲಿ 900 ಬೌಂಡರಿಗಳನ್ನು ಸಿಡಿಸಿದ ದಾಖಲೆಗೆ ಭಾಜನರಾಗಿದ್ದಾರೆ. ಅತ್ತ ಗ್ಲೆನ್ ಮ್ಯಾಕ್ಸ್‌ವೆಲ್, ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದ ಹಿರಿಮೆಗೆ ಪಾತ್ರರಾಗಿದ್ದಾರೆ.'

ಟಿ20 ಕ್ರಿಕೆಟ್‌ನಲ್ಲಿ 900 ಬೌಂಡರಿ ಬಾರಿಸಿದ ಭಾರತದ ಎರಡನೇ ಹಾಗೂ ಒಟ್ಟಾರೆಯಾಗಿ ವಿಶ್ವದ ಏಳನೇ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಕೊಹ್ಲಿ ಬರೆದಿದ್ದಾರೆ.

ಇನ್ನೊಂದೆಡೆ ಮ್ಯಾಕ್ಸ್‌ವೆಲ್, ಐಪಿಎಲ್ 2021ರಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದ ಐದನೇ ಬ್ಯಾಟ್ಸ್‌ಮನ್ ಎನಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ಬೌಂಡರಿ ಸರದಾರರು:
1. ಕ್ರಿಸ್ ಗೇಲ್: 1105
2. ಶಿಖರ್ ಧವನ್: 986
3. ಡೇವಿಡ್ ವಾರ್ನರ್: 973
4. ಅಲೆಕ್ಸ್ ಹೇಲ್ಸ್: 967
5. ಆ್ಯರೋನ್ ಫಿಂಚ್: 956
6. ಬ್ರೆಂಡನ್ ಮೆಕಲಮ್: 924
7. ವಿರಾಟ್ ಕೊಹ್ಲಿ: 900*

ಐಪಿಎಲ್ 2021ರಲ್ಲಿ ಗರಿಷ್ಠ ರನ್ ಸರದಾರರು: (ಎಲಿಮಿನೇಟರ್‌ನಲ್ಲಿ ಆರ್‌ಸಿಬಿ ಇನ್ನಿಂಗ್ಸ್ ಅಂತ್ಯಕ್ಕೆ)
1. ಕೆ.ಎಲ್. ರಾಹುಲ್: 626
2. ಋತುರಾಜ್ ಗಾಯಕವಾಡ್: 603
3. ಶಿಖರ್ ಧವನ್: 551
4. ಫಫ್ ಡುಪ್ಲೆಸಿ: 547
5. ಗ್ಲೆನ್ ಮ್ಯಾಕ್ಸ್‌ವೆಲ್: 513

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT