ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024| RCB vs LSG: ಆರ್‌ಸಿಬಿಗೆ 182 ರನ್ ಗುರಿ ನೀಡಿದ ಲಖನೌ

Published 2 ಏಪ್ರಿಲ್ 2024, 14:04 IST
Last Updated 2 ಏಪ್ರಿಲ್ 2024, 14:04 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಲಖನೌ ಸೂಪರ್ ಜೈಂಟ್ಸ್ 182 ರನ್‌ಗಳ ಗೆಲುವಿನ ಗುರಿ ನೀಡಿದೆ.

ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಲಖನೌ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತು.

ಆರಂಭಿಕ ಬ್ಯಾಟರ ಕ್ವಿಂಟನ್ ಡಿಕಾಕ್ 56 ಎಸೆತಗಳಲ್ಲಿ 8 ಬೌಂಡರಿ, 5 ಸಿಕ್ಸರ್ ಸಹಿತ 81 ರನ್ ಸಿಡಿಸಿದರು. ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶಿಸಿದರು.

ುಳಿದ ಬ್ಯಾಟರ್‌ಗಳಿಂದ ಉತ್ತಮ ಆಟ ಬಾರದ ಹಿನ್ನೆಲೆಯಲ್ಲಿ ಒಂದು ಹಂತದಲ್ಲಿ ತಂಡ 160ರ ಗಡಿ ದಾಟುವುದೂ ಕಷ್ಟ ಎನ್ನುವಂತಿತ್ತು. ಅಂತ್ಯದಲ್ಲಿ ಅಬ್ಬರಿಸಿದ ನಿಕೊಲಸ್ ಪೂರನ್ 21 ಎಸೆತಗಳಲ್ಲಿ 5 ಸಿಕ್ಸರ್ 1 ಬೌಂಡರಿ ಸಹಿತ ಅಜೇಯ 40 ರನ್ ಸಿಡಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಗಳಿಸುವಲ್ಲಿ ನೆರವಾದರು.

ಉಳಿದಂತೆ ಮಾರ್ಕಸ್ ಸ್ಟೋಯನಿಸ್ 24, ನಾಯಕ ಕೆ.ಎಲ್. ರಾಹುಲ್ 20 ರನ್ ಗಳಿಸಿದರು.

ಬೆಂಗಳೂರು ಪರ ಗ್ಲೆನ್ ಮ್ಯಾಕ್ಸ್‌ವೆಲ್ 23 ರನ್‌ಗೆ 2 ವಿಕೆಟ್ ಉರುಳಿಸಿದರು, ಮೊಹಮ್ಮದ್ ಸಿರಾಜ್, ದಯಾಳ್ ಮತ್ತು ಟಾಪ್ಲಿ ತಲಾ ಒಂದು ವಿಕೆಟ್ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT