ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯದಲ್ಲಿ 5 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.

ಈ ಪಂದ್ಯದಲ್ಲಿ ಬ್ಯಾಟಿಂಗ್ ಸೂಪರ್ಸ್ಟಾರ್ ವಿರಾಟ್ ಕೊಹ್ಲಿ ಅವರು ಅತ್ಯುತ್ತಮ ಪದರ್ಶನ ನೀಡಿದರು. 34 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 49 ರನ್ ಗಳಿಸಿದರು. ಆದರೆ ಅರ್ಧಶತಕ್ಕೆ 1 ರನ್ ಬಾಕಿ ಇರುವಾಗ ಲಖನೌ ತಂಡದ ವೇಗಿ ಆವೇಶ್ ಖಾನ್ ಅವರ ಬೌಲಿಂಗ್ನಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಒಪ್ಪಿಸಿದರು.

ವಿರಾಟ್ ಕೊಹ್ಲಿ ಔಟ್ ಆಗುತ್ತಿದ್ದಂತೆ ಡಗೌಟ್ನಲ್ಲಿ ಕುಳಿತಿದ್ದ ಅವರ ಪತ್ನಿ ಅನುಷ್ಕಾ ಶರ್ಮಾ ಅವರು ನಿರಾಶೆ ವ್ಯಕ್ತಪಡಿಸಿದ್ದಾರೆ. ಸದ್ಯ, ಅವರ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಅಭಿಮಾನಿಗಳು ವಿರಾಟ್ ಅವರು ತಮ್ಮ ಅರ್ಧಶತಕ ಪೂರೈಸಲಿದ್ದಾರೆ ಎಂದುಕೊಂಡಿದ್ದರು. ಆದರೆ ಒಂದು ರನ್ ಬೇಕಿರುವಾಗ ಲಾಂಗ್ ಆಫ್ನಲ್ಲಿ ಕ್ಯಾಚ್ ನೀಡಿ ಔಟ್ ಆದರು. ಪಂದ್ಯ ವೀಕ್ಷಿಸಲು ಬಂದಿದ್ದ ಅಭಿಮಾನಿಗಳು ನಿರಾಶೆಗೊಂಡರು.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಉತ್ತಮ ಪ್ರದರ್ಶನ ನೀಡುವ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ಜತೆಗೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು 49 ರನ್ ಗಳಿಸುವ ಮೂಲಕ ಆರೆಜ್ ಕ್ಯಾಪ್ ಅನ್ನು ತನ್ನದಾಗಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.