ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಆಮ್ಲಜನಕ ಸಿಲಿಂಡರ್ ಪೂರೈಸಲು ನೆರವಾಗುವಂತೆ ಅಖ್ತರ್ ಮನವಿ

Last Updated 24 ಏಪ್ರಿಲ್ 2021, 14:41 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಬಿಕ್ಕಟ್ಟನ್ನು ಎದುರಿಸುತ್ತಿರುವ ಭಾರತಕ್ಕೆ ನೆರವಾಗುವಂತೆ ಪಾಕಿಸ್ತಾನ ಸರ್ಕಾರ ಹಾಗೂ ಅಭಿಮಾನಿಗಳಲ್ಲಿ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಮನವಿ ಮಾಡಿದ್ದಾರೆ.

ಏಪ್ರಿಲ್ 24 ಶನಿವಾರದಂದು ಭಾರತದಲ್ಲಿ ಗರಿಷ್ಠ 3,46,786 ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಇದು ದಿನವೊಂದರಲ್ಲೇ ದಾಖಲಾದ ಗರಿಷ್ಠ ಪ್ರಕರಣಗಳಾಗಿವೆ. ಹಾಗೆಯೇ ಕಳೆದ 24 ತಾಸಿನಲ್ಲಿ 2,624 ಮಂದಿ ಮೃತಪಟ್ಟಿದ್ದಾರೆ.

'ಈಗಿರುವ ಬಿಕ್ಕಟ್ಟಿನ ಪರಿಸ್ಥಿತಿಯನ್ನು ನಿಭಾಯಿಸುವುದು ಯಾವುದೇ ಸರ್ಕಾರಕ್ಕೆ ಕಷ್ಟಕರವಾಗಿದೆ. ಈ ಕಷ್ಟದ ಪರಿಸ್ಥಿತಿಯಲ್ಲಿ ಭಾರತಕ್ಕೆ ಸಹಾಯ ಮಾಡುವಂತೆ ನನ್ನ ಸರ್ಕಾರ ಮತ್ತು ಅಭಿಮಾನಿಗಳಲ್ಲಿ ವಿನಂತಿ ಮಾಡುತ್ತೇನೆ. ಭಾರತಕ್ಕೆ ಸಾಕಷ್ಟು ಆಮ್ಲಜನಕದ ಸಿಲಿಂಡರ್‌ಗಳ ಅಗತ್ಯವಿದೆ. ಆಮ್ಲಜನಕ ಸಿಲಿಂಡರ್‌ಗಳನ್ನು ಭಾರತಕ್ಕೆ ಪೂರೈಸಲು ಪ್ರತಿಯೊಬ್ಬರೂ ದೇಣಿಗೆ ನೀಡಲು ನಾನು ಮನವಿ ಮಾಡುತ್ತೇನೆ' ಎಂದು ಹೇಳಿದ್ದಾರೆ.

'ಭಾರತ ನಿಜಕ್ಕೂ ಕೋವಿಡ್ ವಿರುದ್ಧ ಹೋರಾಡುತ್ತಿದೆ. ಜಾಗತಿಕ ಬೆಂಬಲ ಅತ್ಯಗತ್ಯವಾಗಿದೆ. ಆರೋಗ್ಯ ವ್ಯವಸ್ಥೆಯು ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ನಾವೆಲ್ಲರೂ ಜೊತೆಗಿದ್ದೇವೆ. ಪರಸ್ಪರ ನೆರವಾಗಬೇಕಿದೆ' ಎಂದು ಅಖ್ತರ್ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT