ಸೋಮವಾರ, ಡಿಸೆಂಬರ್ 6, 2021
23 °C

ಯುಎಇ ಟಿ20 ಲೀಗ್: ಎಮಿರೇಟ್ಸ್‌ನಲ್ಲಿ ಕ್ರಿಕೆಟ್ ತಂಡ ಖರೀದಿಸಲಿರುವ ರಿಲಯನ್ಸ್

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿರುವ ‘ಯುಎಇ ಟಿ20 ಲೀಗ್’ ಟೂರ್ನಿಯಲ್ಲಿ ತಂಡವೊಂದನ್ನು ಖರೀದಿಸಲು ಭಾರತದ  ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್  ಉದ್ದೇಶಿಸಿದೆ.

ಎಮಿರೇಟ್ಸ್‌ ಕ್ರಿಕೆಟ್ ಮಂಡಳಿಯು ಈ ಲೀಗ್ ಟೂರ್ನಿಯನ್ನು ಆರಂಭಿಸಲಿದೆ. ರಿಲಯನ್ಸ್‌ ಸಂಸ್ಥೆಯ ಮಾಲೀಕತ್ವದ ಮುಂಬೈ ಇಂಡಿಯನ್ಸ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿದೆ.

‘ರಿಲಯನ್ಸ್ ಸಂಸ್ಥೆಯು ಹೊರದೇಶದ ಕ್ರೀಡಾಕ್ಷೇತ್ರದಲ್ಲಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಮೊದಲ ಹೆಜ್ಜೆ ಇದಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ಜಾಗತಿಕ ಮಟ್ಟದಲ್ಲಿ ತಮ್ಮ ಅಭಿಮಾನಿಬಳಗವನ್ನು ವೃದ್ಧಿಸಲು ಇದು ಸಹಕಾರಿಯಾಗಲಿದೆ. ಹೊಸ ಲೀಗ್ ಮೂಲಕ ದೀರ್ಘ ಕಾಲದವರೆಗೆ ಮುಂದುವರಿಯುವ ಉದ್ದೇಶವಿದೆ’ ಎಂದು ಮುಂಬೈ ಇಂಡಿಯನ್ಸ್ ತಂಡದ ಸಹ ಮಾಲೀಕರಾದ ನೀತಾ ಅಂಬಾನಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು