ಆರ್‌ಸಿಬಿ ಶುಭಾರಂಭ
ಉದ್ಘಾಟನಾ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಆರ್‌ಸಿಬಿ, ಕೇವಲ 3 ವಿಕೆಟ್ ಕಳೆದುಕೊಂಡು 16.2 ಓವರ್‌ಗಳಲ್ಲೇ ಗೆದ್ದಿತು. ಆರಂಭಿಕ ಬ್ಯಾಟರ್‌ಗಳಾದ ಫಿಲ್ ಸಾಲ್ಟ್ (56 ರನ್) ಮತ್ತು ವಿರಾಟ್ ಕೊಹ್ಲಿ (ಅಜೇಯ 59 ರನ್) ಅರ್ಧಶತಕ ಸಿಡಿಸಿದರು.