ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024: ಡೆಲ್ಲಿ ಕ್ಯಾಪಿಟಲ್ಸ್ ನಾಯಕರಾಗಿ ರಿಷಭ್ ಪಂತ್ ನೇಮಕ

Published 19 ಮಾರ್ಚ್ 2024, 17:01 IST
Last Updated 19 ಮಾರ್ಚ್ 2024, 17:01 IST
ಅಕ್ಷರ ಗಾತ್ರ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ರಿಷಭ್ ಪಂತ್ ಅವರನ್ನು ಮರು ನೇಮಕ ಮಾಡಲಾಗಿದೆ.

2022ರ ಡಿಸೆಂಬರ್‌ನಲ್ಲಿ ಸಂಭವಿಸಿದ್ದ ಭಯಾನಕ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪಂತ್, 14 ತಿಂಗಳ ಕಾಲ ಮೈದಾನದಿಂದ ಹೊರಗುಳಿದಿದ್ದರು.

‘ನಮ್ಮ ತಂಡದ ನಾಯಕರಾಗಿ ಪಂತ್ ಅವರನ್ನು ಮರುಸ್ವಾಗತಿಸುತ್ತಿರುವುದಕ್ಕೆ ಅತ್ಯಂತ ಸಂತಸವಾಗುತ್ತಿದೆ. ಅವರ ಕೆಚ್ಚೆದೆಯೇ ಅವರ ಬ್ರಾಂಡ್ ಆಗಿದೆ ಹೊಸ ಉತ್ಸಾಹ, ಚೈತನ್ಯದ ಮೂಲಕ ಅವರನ್ನು ತಂಡದಲ್ಲಿ ನೋಡಲು ಇಚ್ಛಿಸುತ್ತೇನೆ’ಎಂದು ಡೆಲ್ಲಿ ತಂಡದ ಮುಖ್ಯಸ್ಥ ಮತ್ತು ಸಹ ಮಾಲೀಕ ಪಾರ್ಥ ಜಿಂದಾಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕೆಟ್ ಕೀಪರ್–ಬ್ಯಾಟರ್ ರಿಷಭ್ ಪಂತ್, ವಿಶಾಖಪಟ್ಟಣದ ತಂಡದ ಪೂರ್ವ ಸಿದ್ಧತಾ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

ಮಾರ್ಚ್ 23ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಮೊದಲ ಪಂದ್ಯ ಆಡುವ ಮೂಲಕ ಡೆಲ್ಲಿ ತನ್ನ ಐಪಿಎಲ್ ಅಭಿಯಾನ ಆರಂಭಿಸಲಿದೆ.

ಇತ್ತೀಚೆಗೆ, ಐಪಿಎಲ್‌ನಲ್ಲಿ ಆಡಲು ಬಿಸಿಸಿಐ, ರಿಷಭ್ ಪಂತ್‌ಗ ಫಿಟ್ನೆಸ್ ದೃಢೀಕರಣ ನೀಡಿತ್ತು.

‘ಉತ್ತರಾಖಂಡದಲ್ಲಿ ಸಂಭವಿಸಿದ ಮಾರಣಾಂತಿಕ ಅಪಘಾತದ ಬಳಿಕ 14 ತಿಂಗಳ ಚಿಕಿತ್ಸೆ ಮತ್ತು ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡ ರಿಷಭ್ ಪಂತ್ ಅವರು ಈಗ ಐಪಿಎಲ್ 2024ಕ್ಕೆ ಫಿಟ್ ಆಗಿದ್ದಾರೆ’ ಎಂದು ಬಿಸಿಸಿಐ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT