ಕೋಲ್ಕತ್ತ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಉಪನಾಯಕ ರಿಷಭ್ ಪಂತ್ ಅವರು ಸಿಕ್ಸರ್ ಸಿಡಿಸುವುದರಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಈಡನ್ ಗಾರ್ಡನ್ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ರಿಷಭ್ ಪಂತ್, 2 ಸಿಕ್ಸರ್ ಹಾಗೂ 2 ಬೌಂಡರಿ ನೆರವಿನಿಂದ 27 ರನ್ ಕಲೆಹಾಕಿ ಔಟ್ ಆದರು. ಈ ವೇಳೆ ಅವರು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದ್ದ ಅತೀ ಹೆಚ್ಚು ಸಿಕ್ಸರ್ಗಳ ದಾಖಲೆ ಮುರಿದಿದ್ದಾರೆ.

ಪಂತ್ 2 ಸಿಕ್ಸರ್ ಸಿಡಿಸುತ್ತಿದ್ದಂತೆ ಭಾರತದ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ದಾಖಲೆ ಬರೆದರು. ಅವರು ಪ್ರಸ್ತುತ 47 ಪಂದ್ಯಗಳಲ್ಲಿ 92 ಸಿಕ್ಸರ್ ಬಾರಿಸಿದ್ದಾರೆ. ಇದಕ್ಕೂ ಮೊದಲು ಈ ದಾಖಲೆ 178 ಇನಿಂಗ್ಸ್ಗಳಿಂದ 91 ಸಿಕ್ಸರ್ ಬಾರಿಸಿದ್ದ ಸೆಹ್ವಾಗ್ ಹೆಸರಿನಲ್ಲಿತ್ತು.

ಈ ಲಿಸ್ಟ್ನಲ್ಲಿ ಮೂರನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ 116 ಇನಿಂಗ್ಸ್ಗಳಲ್ಲಿ 88 ಸಿಕ್ಸರ್ಗಳನ್ನು ಬಾರಿಸಿದ್ದಾರೆ.
.ಗಾಯದ ಬಳಿಕ ತಂಡಕ್ಕೆ ಪುನರಾಗಮನ ಸುಲಭವಲ್ಲ: ರಿಷಭ್ ಪಂತ್.IND vs SA Test | ದ. ಆಫ್ರಿಕಾ ಮಾರಕ ಬೌಲಿಂಗ್: ಅಲ್ಪ ಮೊತ್ತಕ್ಕೆ ಕುಸಿದ ಭಾರತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.