ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

14 ತಿಂಗಳ ಬಳಿಕ ರಿಷಭ್ ಪಂತ್ ಕಣಕ್ಕೆ: ಫಿಟ್ನೆಸ್‌ ದೃಢೀಕರಿಸಿದ ಬಿಸಿಸಿಐ

Published 12 ಮಾರ್ಚ್ 2024, 8:05 IST
Last Updated 12 ಮಾರ್ಚ್ 2024, 8:05 IST
ಅಕ್ಷರ ಗಾತ್ರ

ನವದೆಹಲಿ: ಭಾರತ ತಂಡದ ಎಡಗೈ ಆಟಗಾರ ರಿಷಬ್ ಪಂತ್‌ ಅವರ ಬಹುನಿರೀಕ್ಷಿತ ಐಪಿಎಲ್‌ ಟೂರ್ನಿಗೆ ಪುನರಾಗಮನ ಸನ್ನಿಹಿತವಾಗಿದೆ. ರಿಷಭ್ ಪಂತ್ ಪುನರಾಗಮನ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರತಿಕ್ರಿಯಿಸಿದೆ.

ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಭಾಗಿಯಾಗಿದ್ದ ರಿಷಭ್ ಪಂತ್ 14 ತಿಂಗಳ ಬಳಿಕ ಮ್ಯಾಚ್‌ ಫಿಟ್ನೆಸ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬಿಸಿಸಿಐ ‘ಎಕ್ಸ್‌’ನಲ್ಲಿ ಮಾಹಿತಿ ನೀಡಿದೆ.

ರಿಷಭ್ ಪಂತ್ ಅವರು ಮುಂಬರುವ ಐಪಿಎಲ್‌ ಆವೃತ್ತಿಯ ಡೆಲ್ಲಿ ಕ್ಯಾಪಿಟಲ್ಸ್‌ಗೆ ನಾಯಕರಾಗಲು ಸಿದ್ಧರಾಗಿದ್ದಾರೆ ಎಂದು ತಂಡದ ಮಾಲೀಕ ಪಾರ್ಥ್ ಜಿಂದಾಲ್ ತಿಳಿಸಿದ್ದಾರೆ.

2022ರ ಡಿಸೆಂಬರ್‌ನಲ್ಲಿ ಪಂತ್ ಅವರು ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಡೆಹ್ರಾಡೂನ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ 2023ರ ಏಕದಿನ ವಿಶ್ವಕಪ್ ಸೇರಿದಂತೆ ಹಲವು ಸರಣಿಗಳಿಂದ ಹೊರಗುಳಿದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT