ಶುಕ್ರವಾರ, ಜೂನ್ 25, 2021
22 °C

ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ ಪಂತ್‌

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಲು ನಿರ್ಧರಿಸಿರುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ ರಿಷಭ್ ಪಂತ್‌ ಅವರು ಆಮ್ಲಜನಕ, ಬೆಡ್ ಮತ್ತು ಕಿಟ್‌ಗಳನ್ನು ಒದಗಿಸುವುದಕ್ಕಾಗಿ ಸಹಾಯ ಮಾಡಲು ಮುಂದಾಗಿದ್ದಾರೆ. ಆದರೆ ಇದಕ್ಕಾಗಿ ನೀಡುವ ಮೊತ್ತವನ್ನು ಬಹಿರಂಗಪಡಿಸದೇ ಇರಲು ನಿರ್ಧರಿಸಿದ್ದಾರೆ. ‌

23 ವರ್ಷದ ಪಂತ್‌ ಗುರುಗ್ರಾಮ್ ಮೂಲದ ಸರ್ಕಾರೇತರ ಸಂಸ್ಥೆಯಾದ ಹೇಮಕುಂತ್ ಫೌಂಡೇಷನ್‌ಗೆ ಹಣ ನೀಡುವುದಾಗಿ ತಿಳಿಸಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಕೊರೊನಾ ಪೀಡಿತರಿಗಾಗಿ ಹಗಲಿರುಳೆನ್ನದೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಕಾರ್ಯವನ್ನು ಮುಕ್ತಕಂಠದಿಂದ ಪಂತ್‌ ಪ್ರಶಂಸಿಸಿದ್ದು ಅವರ ಶ್ರಮಕ್ಕೆ ಎಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದು ಹೇಳಿದ್ದಾರೆ.

‘ತಂಡ ಕಟ್ಟಿಕೊಂಡು ಮಾಡುವ ಕೆಲಸಕ್ಕೆ ಪ್ರತಿಫಲ ಸಿಗುತ್ತದೆ ಎಂಬುದನ್ನು ಕ್ರೀಡೆಯಿಂದ ನಾನು ಕಲಿತಿದ್ದೇನೆ.  ಹತ್ತಿರದವರು ಸಾವಿಗೀಡಾದಾಗ ಅಥವಾ ಸಂಕಷ್ಟ ಅನುಭವಿಸಿದಾಗ ಇದೇ ರೀತಿಯಲ್ಲಿ ಕಷ್ಟಕ್ಕೆ ಒಳಗಾಗಿರುವ ಸಾವಿರಾರು ಮಂದಿ ಹಾಗೂ ಅವರ ಕುಟುಂಬದವರನ್ನು ನಾನು ನೆನಪಿಸಿಕೊಳ್ಳುತ್ತಿದ್ದೇನೆ. ಹೀಗಾಗಿ ಗ್ರಾಮೀಣ ಭಾರತದ ಜನರ ಹಿತಕ್ಕಾಗಿ ಕೆಲಸ ಮಾಡುತ್ತಿರುವ ಸಂಸ್ಥೆಯೊಂದಿಗೆ ಕೈಜೋಡಿಲು ನಿರ್ಧರಿಸಿದ್ದೇನೆ’ ಎಂದು ಅವರು ವಿವರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು