ಶನಿವಾರ, ಅಕ್ಟೋಬರ್ 23, 2021
22 °C

IPL 2021: ರಿಷಭ್‌ ಪಂಥ್‌ ಪ್ರಬುದ್ಧತೆ ಉಚ್ಛ್ರಾಯ ಮಟ್ಟದ್ದು: ರಿಕಿ ಪಾಂಟಿಂಗ್‌

ಪಿಟಿಐ Updated:

ಅಕ್ಷರ ಗಾತ್ರ : | |

ಅಬುಧಾಬಿ: ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ರಿಷಭ್‌ ಪಂತ್‌ ಅವರ ಪ್ರಬುದ್ಧತೆಯ ಮಟ್ಟ ಶ್ರೇಷ್ಠವಾಗಿದೆ ಎಂದು ತಂಡದ ಕೋಚ್‌ ರಿಕಿ ಪಾಂಟಿಂಗ್‌ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಂಡದ ಸಹ ಆಟಗಾರರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ರಿಷಭ್‌ ಪಂತ್‌, ತಂಡವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಿದ್ದಾರೆ. ಹಾಗೆಯೇ ಭಾರತದ ತಂಡದಲ್ಲಿ ಉತ್ತಮ ಆಟಗಾರನಾಗಿ ಗುರುತಿಸಿಕೊಳ್ಳುವ ಸಾಮರ್ಥ್ಯ ಅವರಿಗಿದೆ’ ಎಂದು ಹೇಳಿದ್ದಾರೆ.

ಈ ಹಿಂದೆ ಡೆಲ್ಲಿ ತಂಡದ ನಾಯಕರಾಗಿದ್ದ ಶ್ರೇಯಸ್‌ ಐಯ್ಯರ್‌ ಅವರು ಗಾಯದ ಸಮಸ್ಯೆಯಿಂದಾಗಿ ವಿಶ್ರಾಂತಿ ಪಡೆದುಕೊಂಡಿದ್ದರು. ಹಾಗಾಗಿ ಪಂತ್‌, ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದರು.

ಕಳೆದ ಆವೃತ್ತಿಯಲ್ಲಿ ಪಂತ್‌ ನಾಯಕತ್ವದ ಡೆಲ್ಲಿ ತಂಡ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಿತ್ತು. ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಐಪಿಎಲ್ ಸರಣಿ ಪುನರಾರಂಭಗೊಂಡಿದ್ದು, ದ್ವಿತೀಯಾರ್ಧದ ಪಂದ್ಯಗಳನ್ನು ದುಬೈನಲ್ಲಿ ಆಯೋಜಿಸಲಾಗಿದೆ.

ಡೆಲ್ಲಿ ತಂಡ ಈಗಾಗಲೇ ಆಡಿರುವ ಎಂಟು ಪಂದ್ಯಗಳಲ್ಲಿ ಆರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು