ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ: ಒಂದು ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ಪಂತ್, ಶ್ರೇಯಸ್ ಅಯ್ಯರ್ ಔಟ್!

Last Updated 29 ಏಪ್ರಿಲ್ 2022, 7:50 IST
ಅಕ್ಷರ ಗಾತ್ರ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್ ಟೂರ್ನಿಯಲ್ಲಿ ಗುರುವಾರ ಡೆಲ್ಲಿ ಕ್ಯಾಪಿಟಲ್ ತಂಡದ ನಾಯಕ ರಿಷಭ್ ಪಂತ್ ಅದ್ಭುತ ಕ್ಯಾಚ್‌ ಹಿಡಿಯುವ ಮೂಲಕ ಗಮನ ಸೆಳೆದಿದ್ದಾರೆ.

ಇದೀಗ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಪಂದ್ಯದಲ್ಲಿ ಪಂಜಾಬ್‌ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ, ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 146 ರನ್‌ ಗಳಿಸಿತ್ತು.

147 ರನ್‌ ಗುರಿ ಬೆನ್ನತ್ತಿದ್ದ ಡೆಲ್ಲಿ 19 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತ್ತು.

ಕೋಲ್ಕತ್ತ ಆರಂಭ ಉತ್ತಮವಾಗಿರಲಿಲ್ಲ. ಆ್ಯರನ್ ಫಿಂಚ್ (3), ವೆಂಕಟೇಶ್ ಅಯ್ಯರ್ (6) ರನ್ ಗಳಿಸಿ ನಿರಾಸೆ ಮೂಡಿಸಿದರು. ಬಳಿಕ ಕ್ರೀಸ್‌ಗೆ ಬಂದ ಶ್ರೇಯಸ್ ಅಯ್ಯರ್ 42, ನಿತೀಶ್ ರಾಣಾ 57 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ಕುಲದೀಪ್ ಯಾದವ್ ಎಸೆದ 13ನೇ ಓವರ್‌ನಲ್ಲಿ ಶ್ರೇಯಸ್ ಬೌಂಡರಿ ಗಳಿಸಲು ಯತ್ನಿಸಿದರು. ಆದರೆ, ವಿಕೆಟ್ ಕೀಪರ್ ರಿಷಭ್ ಪಂತ್‌ ಆಮೋಘವಾಗಿ ಹಿಡಿದ ಕ್ಯಾಚ್‌ಗೆ ವಿಕೆಟ್‌ ಒಪ್ಪಿಸಿದ್ದರು.

ರಿಷಭ್ ನಾಯಕತ್ವದ ಡೆಲ್ಲಿ ಟೂರ್ನಿಯಲ್ಲಿ ಆಡಿರುವ 8 ಪಂದ್ಯಗಳಲ್ಲಿ 4ರಲ್ಲಿ ಗೆದ್ದು, 4ರಲ್ಲಿ ಸೋತಿದೆ. ಪಾಯಿಂಟ್ಸ್‌ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

ಏ.22ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ರಾಜಸ್ಥಾನ ರಾಯಲ್ಸ್‌ ವಿರುದ್ಧದ ಐಪಿಎಲ್‌ ಪಂದ್ಯದ ವೇಳೆ ನಡೆದ ನೋ ಬಾಲ್ ವಿವಾದ ಚರ್ಚೆಗೆ ಗ್ರಾಸವಾಗಿತ್ತು.

ಐಪಿಎಲ್ ನಿಯಮ ಉಲ್ಲಂಘನೆ ಕಾರಣಕ್ಕೆ ರಿಷಭ್‌ ಪಂತ್‌ಗೆ ಪಂದ್ಯದ ಸಂಭಾವನೆಯ ಶೇ 100 ರಷ್ಟು ದಂಡವನ್ನು ವಿಧಿಸಿದ್ದರೆ, ಸಹಾಯಕ ಕೋಚ್ ಪ್ರವೀಣ್ ಆಮ್ರೆ ಅವರಿಗೆ ಒಂದು ಪಂದ್ಯಕ್ಕೆ ನಿಷೇಧ ವಿಧಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT