ಇಂಡಿಯನ್ ಪ್ರೀಮಿಯರ್ ಲೀಗ್‌ನ ಈ ಬಾರಿಯ ಸೀಸನ್‌ನಿಂದ ಶ್ರೇಯಸ್ ಐಯ್ಯರ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯಿಂದ ಶ್ರೇಯಸ್ ಐಯ್ಯರ್ ಬಳಲುತ್ತಿದ್ದು, ಈ ಬಾರಿಯ ಐಪಿಎಲ್ ಸೀಸನ್‌ನಲ್ಲಿ ಅವರು ಆಟವಾಡುತ್ತಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡ ಮಂಗಳವಾರ ಹೇಳಿಕೆ ನೀಡಿದೆ.

ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ, ವಿಕೆಟ್‌ಕೀಪರ್ ಮತ್ತು ಬ್ಯಾಟ್ಸ್‌ಮನ್ ರಿಷಬ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ರಿಷಬ್ ಕ್ಯಾಪ್ಟನ್ ಸ್ಥಾನ ವಹಿಸಿಕೊಳ್ಳುತ್ತಿರುವ ಕುರಿತು ಡೆಲ್ಲಿ ಕ್ಯಾಪಿಟಲ್ಸ್ ಟ್ವೀಟ್ ಮಾಡಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಪಂದ್ಯದಲ್ಲಿ ಶ್ರೇಯಸ್ ಎಡಭುಜಕ್ಕೆ ಗಾಯವಾಗಿದೆ.

ಶ್ರೇಯಸ್‌ರನ್ನು ನಾವು ಮಿಸ್ ಮಾಡಿಕೊಳ್ಳುತ್ತೇವೆ, ಅವರು ಬೇಗನೆ ಗುಣಮುಖರಾಗಿ ಮತ್ತೆ ತಂಡಕ್ಕೆ ಮರಳುವಂತಾಗಲಿ ಎಂದು ಡೆಲ್ಲಿ ಕ್ಯಾಪಿಟಲ್ಸ್ ಹೇಳಿದೆ.

ಏಪ್ರಿಲ್ 9ರಿಂದ ಪ್ರಸಕ್ತ ಸಾಲಿನ ಐಪಿಎಲ್ ಸರಣಿ ಆರಂಭವಾಗುತ್ತಿದೆ. ಚೆನ್ನೈ ಸೂಪರ್ ಕಿಂಗ್ ಮತ್ತು ಡೆಲ್ಲಿ ಡೇರ್‌ಡೆವಿಲ್ಸ್ ನಡುವಣ ಮೊದಲ ಪಂದ್ಯ ಮುಂಬೈನಲ್ಲಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.