ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್ ವಿರುದ್ಧದ ಮೊದಲ ಟಿ–20ಗೆ ರೋಹಿತ್ ಲಭ್ಯ, 2ನೇ ಪಂದ್ಯಕ್ಕೆ ಕೊಹ್ಲಿ

Last Updated 1 ಜುಲೈ 2022, 4:11 IST
ಅಕ್ಷರ ಗಾತ್ರ

ಬರ್ಮಿಂಗ್‌ಹ್ಯಾಮ್: ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಇಂಗ್ಲೆಂಡ್ ವಿರುದ್ಧದ ಮರುನಿಗದಿತ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವ ನಾಯಕ ರೋಹಿತ್ ಶರ್ಮಾ, ಏಕದಿನ ಮತ್ತು ಟಿ–20 ಸರಣಿಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಗುರುವಾರ ರಾತ್ರಿ ಬಿಸಿಸಿಐ ಬಿಡುಗಡೆ ಮಾಡಿರುವ ತಂಡದಲ್ಲಿ ಅವರನ್ನು ಹೆಸರಿಸಲಾಗಿದೆ.

ಮೂರು ಪಂದ್ಯಗಳ ಟಿ20 ಸರಣಿ ಜುಲೈ 7ರಂದು ಸೌತಾಂಪ್ಟನ್‌ನಲ್ಲಿ ಆರಂಭವಾಗಲಿದೆ.

ರೋಹಿತ್ ಎರಡನೇ ಟಿ20 ಪಂದ್ಯದಿಂದ ಆಡಬೇಕಿತ್ತು. ಆದರೆ, ಅವರು ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಂಡ ಕಾರಣ, ಮೊದಲ ಪಂದ್ಯದಿಂದ ಲಭ್ಯವಿರುತ್ತಾರೆ.

ಜುಲೈ 9 ರಂದು ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಎರಡನೇ ಪಂದ್ಯದಿಂದ ವಿರಾಟ್ ಕೊಹ್ಲಿ, ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ ಮತ್ತು ಶ್ರೇಯಸ್ ಅಯ್ಯರ್ ಸೇರಿದಂತೆ ಐವರು ಆಟಗಾರರು ತಂಡವನ್ನು ಸೇರಿಕೊಳ್ಳಲಿದ್ದಾರೆ.

ವೇಗಿ ಮೊಹಮ್ಮದ್ ಶಮಿ ಅವರನ್ನು ಟಿ–20 ತಂಡದಿಂದ ಹೊರಗಿಡಲಾಗಿದೆ.

ಜುಲೈ 15 ರಿಂದ 20 ರವರೆಗೆ ನಡೆಯಲಿರುವ ಏಕದಿನ ಸರಣಿಯ ತಂಡದಲ್ಲಿ ಶಿಖರ್ ಧವನ್ (37) ಮತ್ತು ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಮೊದಲ ಟಿ20ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್

2ನೇ ಮತ್ತು 3ನೇ ಟಿ20ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್

3 ಏಕದಿನ ಪಂದ್ಯಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಹಾಲ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT