ಗುರುವಾರ , ಸೆಪ್ಟೆಂಬರ್ 23, 2021
25 °C

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ಐದನೇ ಸ್ಥಾನಕ್ಕೇರಿದ ರೋಹಿತ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ಅವರು ನಾಯಕ ವಿರಾಟ್‌ ಕೊಹ್ಲಿ ಅವರನ್ನು ಹಿಂದಿಕ್ಕಿ ಐಸಿಸಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಐದನೇ ಸ್ಥಾನಕ್ಕೇರಿದ್ದಾರೆ.

ಇಂಗ್ಲೆಂಡ್‌ ಎದುರಿನ ಮೂರನೇ ಟೆಸ್ಟ್ ಪಂದ್ಯದ ಎರಡು ಇನಿಂಗ್ಸ್‌ಗಳಲ್ಲಿ ಕ್ರಮವಾಗಿ 19 ಮತ್ತು 59 ರನ್ ಗಳಿಸಿದ ರೋಹಿತ್ ರ‍್ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಬಡ್ತಿ ಪಡೆದಿದ್ದಾರೆ. ಇದು ಅವರ ಜೀವನಶ್ರೇಷ್ಠ ಕ್ರಮಾಂಕವಾಗಿದೆ. ಕೊಹ್ಲಿ ಆರನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್ ಪರಿಣತ ಚೇತೇಶ್ವರ್ ಪೂಜಾರ ಮೂರು ಸ್ಥಾನ ಏರಿಕೆ ದಾಖಲಿಸಿ 15ನೇ ಸ್ಥಾನಕ್ಕೆ ತಲುಪಿದ್ದಾರೆ. ಅವರಿಗಿಂತ ವಿಕೆಟ್‌ ಕೀಪರ್‌ ರಿಷಭ್ ಪಂತ್ (12ನೇ ಸ್ಥಾನ) ಮುಂದೆ ಇದ್ದಾರೆ.

ಜಸ್‌ಪ್ರೀತ್ ಬೂಮ್ರಾ ಅವರು ಬೌಲರ್‌ಗಳ ಕ್ರಮಾಂಕದಲ್ಲಿ ಒಂದು ಸ್ಥಾನ ಏರಿಕೆಯೊಂದಿಗೆ ಒಂಬತ್ತನೇ ಸ್ಥಾನದಲ್ಲಿದ್ದಾರೆ. ಆರ್‌.ಅಶ್ವಿನ್ ಎರಡನೇ ಸ್ಥಾನದಲ್ಲಿ ಸ್ಥಿರವಾಗಿದ್ದಾರೆ. ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ರೂಟ್‌ ಸಾಧನೆ: ಅದ್ಭುತ ಲಯದಲ್ಲಿರುವ ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌ ಆರು ವರ್ಷಗಳ ಬಳಿಕ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಭಾರತದ ಎದುರಿನ ಮೂರು ಟೆಸ್ಟ್ ಪಂದ್ಯಗಳಲ್ಲಿ 507 ರನ್‌ ಗಳಿಸಿದ ಹಿನ್ನೆಲೆಯಲ್ಲಿ ಅವರ ರ‍್ಯಾಂಕಿಂಗ್‌ನಲ್ಲಿ ಏರಿಕೆ ಕಂಡುಬಂದಿದೆ.

2015ರಲ್ಲಿ ಕೊನೆಯ ಬಾರಿ ಅವರು ಅಗ್ರಸ್ಥಾನದಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು