ಸೋಮವಾರ, ಏಪ್ರಿಲ್ 19, 2021
24 °C
ವಿಶ್ವಕಪ್‌ ಕ್ರಿಕೆಟ್‌

ರಿಷಭ್‌ ವಿಶ್ವಾಸದಿಂದ ಆಡಬೇಕು: ರೋಹಿತ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬರ್ಮಿಂಗಂ: ‘ರಿಷಭ್‌ ಪಂತ್‌ ಪ್ರತಿಭಾನ್ವಿತ ಬ್ಯಾಟ್ಸ್‌ಮನ್‌. ವಿಶ್ವಕಪ್‌ನಂತಹ ಮಹತ್ವದ ಟೂರ್ನಿಯಲ್ಲಿ ಅವರು ತುಂಬು ವಿಶ್ವಾಸದಿಂದ ಆಡಬೇಕು. ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಬೇಕು’ ಎಂದು ಭಾರತ ತಂಡದ ಉಪ ನಾಯಕ ರೋಹಿತ್‌ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಗೆಲುವಿನ ಓಟಕ್ಕೆ ಇಂಗ್ಲೆಂಡ್ ತಡೆ!

‘ವಿಶ್ವಕಪ್‌ನಲ್ಲಿ ಅವರು ಚೊಚ್ಚಲ ಪಂದ್ಯ ಆಡಿದ್ದಾರೆ. ಈಗಲೇ ಅವರಿಂದ ಹೆಚ್ಚಿನದನ್ನು ನಿರೀಕ್ಷಿಸಬಾರದು. ಅವರು ಎಲ್ಲಾ ಪಂದ್ಯಗಳಲ್ಲೂ ನೈಜ ಸಾಮರ್ಥ್ಯ ತೋರಬೇಕು. ದೊಡ್ಡ ಹೊಡೆತಗಳನ್ನು ಬಾರಿಸುವಾಗ ಅವರಲ್ಲಿ ವಿಶ್ವಾಸದ ಕೊರತೆ ಎದ್ದು ಕಾಣುತ್ತದೆ. ಹಾಗಾಗದಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.

‘ರಿಷಭ್‌, ಬ್ಯಾಟಿಂಗ್‌ಗೆ ಬಂದ ತಕ್ಷಣವೇ ಪಿಚ್‌ನ ಗುಣ ಅರಿತುಕೊಳ್ಳಲು ಪ್ರಯತ್ನಿಸಬೇಕು. ಸಾಧ್ಯವಾದಷ್ಟು ಬೇಗ ಪರಿಸ್ಥಿತಿಗೆ ಹೊಂದಿಕೊಂಡು ಆಡುವುದನ್ನು ಕಲಿಯಬೇಕು. ನಾಲ್ಕನೇ ಕ್ರಮಾಂಕದಲ್ಲಿ ಆಡಲು ಅವರು ಸೂಕ್ತ ಆಟಗಾರ. ಮುಂದಿನ ಪಂದ್ಯಗಳಲ್ಲಿ ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಟ್‌ಮ್ಯಾನ್‌ ರೋಹಿತ್‌ 25ನೇ ಶತಕ; ವಿಶ್ವಕಪ್‌ನಲ್ಲಿ 3ನೇ ಬಾರಿ 100

‘ಇಂಗ್ಲೆಂಡ್‌ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತ್ತು. ಹೀಗಾಗಿ ಎದುರಾಳಿ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ಗಳು, ಸ್ಪಿನ್ನರ್‌ಗಳಾದ ಕುಲದೀಪ್‌ ಯಾದವ್‌ ಮತ್ತು ಯಜುವೇಂದ್ರ ಚಾಹಲ್‌ ಅವರು ಬೌಲಿಂಗ್‌ಗೆ ಬಂದಾಗ ಸ್ಫೋಟಕ ಆಟ ಆಡಲು ಮುಂದಾದರು. ನಮ್ಮ ಸ್ಪಿನ್ನರ್‌ಗಳ ಮೇಲೆ ಆರಂಭದಿಂದಲೇ ಒತ್ತಡ ಹೇರುವುದು ಅವರ ಯೋಜನೆಯಾಗಿತ್ತು’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು