ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2021: ಐಪಿಎಲ್ ಇತಿಹಾಸದಲ್ಲೇ ವಿಶಿಷ್ಟ ದಾಖಲೆ ಬರೆದ ಹಿಟ್‌ಮ್ಯಾನ್

Last Updated 23 ಸೆಪ್ಟೆಂಬರ್ 2021, 15:06 IST
ಅಕ್ಷರ ಗಾತ್ರ

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಮಗದೊಂದು ವಿಶಿಷ್ಟ ದಾಖಲೆ ಬರೆದಿದ್ದಾರೆ.

ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ 1,000 ರನ್ ಗಳಿಸಿದ ದಾಖಲೆಗೆ 'ಹಿಟ್‌ಮ್ಯಾನ್' ಖ್ಯಾತಿಯ ರೋಹಿತ್ ಶರ್ಮಾ ಭಾಜನರಾಗಿದ್ದಾರೆ.

ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ತಂಡವೊಂದರ ವಿರುದ್ಧ 1,000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಅಬುಧಾಬಿಯಲ್ಲಿ ಕೆಕೆಆರ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್ ಬಿರುಸಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದರು.

30 ಎಸೆತಗಳನ್ನು ಎದುರಿಸಿದ ರೋಹಿತ್ ನಾಲ್ಕು ಬೌಂಡರಿಗಳ ನೆರವಿನಿಂದ 33 ರನ್ ಗಳಿಸಿದರು. ಅಲ್ಲದೆ ಕ್ವಿಂಟನ್ ಡಿ ಕಾಕ್ ಜೊತೆಗೆ ಮೊದಲ ವಿಕೆಟ್‌ಗೆ 9.2 ಓವರ್‌ಗಳಲ್ಲೇ 78 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ರೋಹಿತ್ ಆಡಿರಲಿಲ್ಲ. ಪರಿಣಾಮ ಮುಂಬೈ ತಂಡವು ಸೋಲಿಗೆ ಶರಣಾಗಿತ್ತು.

ಐಪಿಎಲ್‌ನಲ್ಲಿ ತಂಡವೊಂದರ ವಿರುದ್ಧ ಗರಿಷ್ಠ ರನ್ ಗಳಿಸಿದ ಆಟಗಾರರ ಪಟ್ಟಿ:
ರೋಹಿತ್ ಶರ್ಮಾ: 1000*, ಕೋಲ್ಕತ್ತ ವಿರುದ್ಧ
ಡೇವಿಡ್ ವಾರ್ನರ್: 943, ಪಂಜಾಬ್ ವಿರುದ್ಧ
ಡೇವಿಡ್ ವಾರ್ನರ್: 915, ಕೋಲ್ಕತ್ತ ವಿರುದ್ಧ
ವಿರಾಟ್ ಕೊಹ್ಲಿ: 909, ಡೆಲ್ಲಿ ವಿರುದ್ಧ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT