ಭಾನುವಾರ, ಜನವರಿ 19, 2020
28 °C

ತಂಡಕ್ಕೆ ಮರಳಿದ ರೋಹಿತ್‌ ಶರ್ಮಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ : ಇದೇ ತಿಂಗಳ 24ರಿಂದ ಆಕ್ಲೆಂಡ್‌ನಲ್ಲಿ ಆರಂಭವಾಗುವ ನ್ಯೂಜಿಲೆಂಡ್‌ ಎದುರಿನ ಐದು ಪಂದ್ಯಗಳ ಟ್ವೆಂಟಿ–20 ಕ್ರಿಕೆಟ್‌ ಸರಣಿಗೆ ಭಾನುವಾರ 16 ಸದಸ್ಯರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ.

ಉಪನಾಯಕ ರೋಹಿತ್‌ ಶರ್ಮಾ ಮತ್ತು ಮಧ್ಯಮ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಅವರು ತಂಡಕ್ಕೆ ಮರಳಿದ್ದಾರೆ. ವಿಕೆಟ್‌ ಕೀಪರ್‌ ಸಂಜು ಸ್ಯಾಮ್ಸನ್‌ ಸ್ಥಾನ ಕಳೆದುಕೊಂಡಿದ್ದಾರೆ. ಪ್ರವಾಸದ ವೇಳೆ ಭಾರತ ತಂಡವು, ಮೂರು ಏಕದಿನ ಮತ್ತು ಎರಡು ಟೆಸ್ಟ್‌ ಪಂದ್ಯಗಳನ್ನೂ ಆಡಲಿದೆ.

ತಂಡ ಇಂತಿದೆ: ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮಾ (ಉಪ ನಾಯಕ), ಕೆ.ಎಲ್‌.ರಾಹುಲ್‌, ಶಿಖರ್‌ ಧವನ್‌, ಶ್ರೇಯಸ್‌ ಅಯ್ಯರ್‌, ಮನೀಷ್‌ ಪಾಂಡೆ, ರಿಷಭ್‌ ಪಂತ್‌ (ವಿಕೆಟ್‌ ಕೀಪರ್‌), ಶಿವಂ ದುಬೆ, ಕುಲದೀಪ್‌ ಯಾದವ್‌, ಯಜುವೇಂದ್ರ ಚಾಹಲ್‌, ವಾಷಿಂಗ್ಟನ್‌ ಸುಂದರ್‌, ಜಸ್‌ಪ್ರೀತ್‌ ಬೂಮ್ರಾ, ಮೊಹಮ್ಮದ್‌ ಶಮಿ, ನವದೀಪ್‌ ಸೈನಿ, ರವೀಂದ್ರ ಜಡೇಜ ಮತ್ತು ಶಾರ್ದೂಲ್‌ ಠಾಕೂರ್‌.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು