ಮಂಗಳವಾರ, ನವೆಂಬರ್ 29, 2022
29 °C

ಟಿ20 ಕ್ರಿಕೆಟ್‌ನಲ್ಲಿ 400 ಪಂದ್ಯ ಆಡಿದ ಮೊದಲ ಭಾರತೀಯ ರೋಹಿತ್ ಶರ್ಮಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್ ಇತಿಹಾಸದಲ್ಲಿ 400 ಪಂದ್ಯಗಳಲ್ಲಿ ಆಡಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಗುವಾಹಟಿಯಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯವು ರೋಹಿತ್ ಶರ್ಮಾ ಅವರ 400 ನೇ ಟಿ20 ಪಂದ್ಯವೂ ಆಗಿದೆ. 

ಟಿ20 ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ಆಟಗಾರರೂ ಆಗಿರುವ ರೋಹಿತ್ 2007ರ ಏಪ್ರಿಲ್‌ನಲ್ಲಿ ಬರೋಡಾ ವಿರುದ್ಧ ಮುಂಬೈ ಪರ ತಮ್ಮ ಮೊದಲ ಟಿ20 ಕ್ರಿಕೆಟ್‌ ಆಡಿದ್ದರು. 

ವೆಸ್ಟ್ ಇಂಡೀಸ್ ಆಲ್ ರೌಂಡರ್ ಕೀರಾನ್ ಪೊಲಾರ್ಡ್ ಅತಿ ಹೆಚ್ಚು ಟಿ20 ಪಂದ್ಯಗಳನ್ನು (614) ಆಡಿದ ದಾಖಲೆ ಹೊಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು