ಗುರುವಾರ , ಏಪ್ರಿಲ್ 15, 2021
20 °C

ಅಹಮದಾಬಾದ್ ಪಿಚ್ ವಿಮರ್ಶಕರ ಕಾಲೆಳೆದ ರೋಹಿತ್ ಶರ್ಮಾ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ನಡೆದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಿಚ್ ಗುಣಮಟ್ಟದ ಬಗ್ಗೆ ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆದಿವೆ.

ಇಂಗ್ಲೆಂಡ್ ಮಾಜಿ ನಾಯಕ ಸೇರಿದಂತೆ ಅನೇಕರು ಪಿಚ್ ಗುಣಮಟ್ಟವನ್ನು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ಐಸಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಮಧ್ಯೆ ಸ್ಪಿನ್ ಸ್ನೇಹಿ ಪಿಚ್ ಗುಣಮಟ್ಟದ ಬಗ್ಗೆ ಪ್ರಶ್ನೆ ಎತ್ತಿದವರನ್ನು ಕಾಲೆಳೆಯುವ ಪ್ರಯತ್ನಕ್ಕೆ ಮುಂದಾಗಿರುವ ಭಾರತದ ಬಲಗೈ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ, ನಾಲ್ಕನೇ ಟೆಸ್ಟ್ ಪಂದ್ಯದ ಪಿಚ್ ಹೇಗಿರಬಹುದೆಂದು ಯೋಚನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಅಭ್ಯಾಸದ ವೇಳೆಯಲ್ಲಿ ಮೈದಾನದಲ್ಲಿ ಮಲಗಿ ಪಿಚ್ ಬಗ್ಗೆ ಚಿಂತಿಸುತ್ತಿರುವ ಚಿತ್ರವನ್ನು ಹಂಚಿರುವ ರೋಹಿತ್, ವಿಮರ್ಶಕರಿಗೆ ತಕ್ಕ ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ.

ಈ ಮೊದಲು ಸುದ್ದಿಗೋಷ್ಠಿಯಲ್ಲಿ ಸ್ಪಿನ್ ಸ್ನೇಹಿ ಪಿಚ್ ಅನ್ನು ರೋಹಿತ್ ಶರ್ಮಾ ಸಮರ್ಥಿಸಿಕೊಂಡಿದ್ದರು. ಪ್ರತಿ ತಂಡವು ತಮಗೆ ಬೇಕಾದ ರೀತಿಯಲ್ಲಿ ಪಿಚ್ ರೂಪಿಸಿಕೊಳ್ಳುತ್ತಿದೆ. ಇಂತಹ ಪಿಚ್‌ನಲ್ಲಿ ರಕ್ಷಣಾತ್ಮಕ ಜೊತೆಗೆ ರನ್ ಗಳಿಕೆಯ ತಂತ್ರವನ್ನು ಅನುಸರಿಸುವುದು ಅತಿ ಮುಖ್ಯ ಎಂದು ಹೇಳಿದ್ದರು.

ಇದನ್ನೂ ಓದಿ: 

ಅಂದ ಹಾಗೆ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಅಹಮದಾಬಾದ್‌ನಲ್ಲಿ ನಡೆದ ಚೊಚ್ಚಲ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತ 10 ವಿಕೆಟ್ ಅಂತರದ ಗೆಲುವು ದಾಖಲಿಸಿತ್ತು.

ಈ ಪಂದ್ಯವು ಎರಡೇ ದಿನದಲ್ಲಿ ಕೊನೆಗೊಂಡಿತ್ತು. ಭಾರತೀಯ ಸ್ಪಿನ್ನರ್ ಅಕ್ಷರ್ ಪಟೇಲ್ ಎರಡೂ ಇನ್ನಿಂಗ್ಸ್‌ಗಳಲ್ಲೂ ಐದು ವಿಕೆಟ್ ಸಾಧನೆ ಮಾಡಿದ್ದರು. ಅತ್ತ ಇಂಗ್ಲೆಂಡ್ ನಾಯಕ ಜೋ ರೂಟ್ ಕೂಡಾ ಐದು ವಿಕೆಟ್ ಪಡೆದಿದ್ದರು. ಭಾರತದ ಪರ ಬ್ಯಾಟಿಂಗ್‌ನಲ್ಲಿ ಮಿಂಚಿದ ರೋಹಿತ್ ಶರ್ಮಾ ಅರ್ಧಶತಕ ಸಾಧನೆ ಮಾಡಿದ್ದರು.

ಅಂದ ಹಾಗೆ ಅಹಮದಾಬಾದ್‌ನಲ್ಲೇ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯವು ಮಾರ್ಚ್ 4ರಂದು ಆರಂಭವಾಗಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು