ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

T20 WC: ನ್ಯೂಯಾರ್ಕ್‌ನ ಹೊಸ ಪಿಚ್‌ನಲ್ಲಿ ಆಡಲಿರುವ ಭಾರತ; ರೋಹಿತ್ ಅನಿಸಿಕೆ ಏನು?

Published 31 ಮೇ 2024, 10:17 IST
Last Updated 31 ಮೇ 2024, 10:17 IST
ಅಕ್ಷರ ಗಾತ್ರ

ನ್ಯೂಯಾರ್ಕ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಆಯೋಜನೆಗಾಗಿ ನ್ಯೂಯಾರ್ಕ್‌ನಲ್ಲಿ ಹೊಸ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲಾಗಿದೆ. ಈ ಕುರಿತು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಹ ಉತ್ಸುಕರಾಗಿದ್ದು, ಆದಷ್ಟು ಬೇಗನೇ ಪರಿಸ್ಥಿತಿಗೆ ಹೊಂದಿಕೊಳ್ಳಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಭಾರತ ತನ್ನ ಮೊದಲ ಪಂದ್ಯದಲ್ಲಿ ಜೂನ್ 5ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಇದಕ್ಕೂ ಮೊದಲು ಜೂನ್ 1ರಂದು ಬಾಂಗ್ಲಾದೇಶ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

'ಆದಷ್ಟು ಬೇಗನೇ ಇಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಬೇಕಿದೆ. ಪಿಚ್ ಅನ್ನು ಅರ್ಥಮಾಡಿಕೊಳ್ಳಬೇಕಿದೆ. ಪಿಚ್ ವರ್ತನೆ ಹೇಗಿದೆ ಎಂಬುದು ತಿಳಿದುಕೊಳ್ಳಬೇಕಿದೆ' ಎಂದು ಅವರು ಹೇಳಿದ್ದಾರೆ.

'ಡ್ರಾಪ್ ಇನ್ ಪಿಚ್' ಕುರಿತು ಪ್ರತಿಕ್ರಿಯಿಸಿದ ರೋಹಿತ್, ಆದಷ್ಟು ಬೇಗನೇ ಲಯ ಕಂಡುಕೊಳ್ಳುವುದು ಮುಖ್ಯವೆನಿಸುತ್ತದೆ ಎಂದು ಹೇಳಿದ್ದಾರೆ.

'ಇಲ್ಲಿನ ವಾತಾವರಣ ಚೆನ್ನಾಗಿದೆ. ತೆರೆದ ಮೈದಾನ ಇದಾಗಿದೆ. ಅಭಿಮಾನಿಗಳ ಮುಂದೆ ಆಡಲು ಕಾತರದಲ್ಲಿದ್ದೇನೆ. ವಿಶ್ವಕಪ್ ವೀಕ್ಷಿಸಲು ನ್ಯೂಯಾರ್ಕ್‌ನ ಜನರು ಉತ್ಸುಕರಾಗಿದ್ದಾರೆ. ಇದೇ ಮೊದಲ ಬಾರಿಗೆ ಇಲ್ಲಿ ವಿಶ್ವಕಪ್ ಆಯೋಜನೆಯಾಗುತ್ತಿದೆ. ಎಲ್ಲ ತಂಡಗಳಿಗೂ ಉತ್ತಮ ಬೆಂಬಲ ಸಿಗುವ ನಿರೀಕ್ಷೆಯಿದೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT