ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ವಿಶಿಷ್ಟ ದಾಖಲೆಯೊಂದನ್ನು ಬರೆದಿದ್ದಾರೆ. ಎಲ್ಲ ನಾಲ್ಕು ಪ್ರಮುಖ ಐಸಿಸಿ ಟೂರ್ನಿಗಳಲ್ಲಿ ಫೈನಲ್ಗೆ ತಲುಪಿದ ನಾಯಕ ಎಂಬ ಕೀರ್ತಿಗೆ ರೋಹಿತ್ ಶರ್ಮಾ ಭಾಜನರಾಗಿದ್ದಾರೆ.

ರೋಹಿತ್ ನಾಯಕತ್ವದಲ್ಲೇ 2023ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್, ಏಕದಿನ ವಿಶ್ವಕಪ್ ಮತ್ತು 2024ರ ಟ್ವೆಂಟಿ-20 ವಿಶ್ವಕಪ್ ಫೈನಲ್ಗೆ ಭಾರತ ಪ್ರವೇಶಿಸಿತ್ತು.

ಈಗ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ, ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಫೈನಲ್ಗೆ ಲಗ್ಗೆ ಇಟ್ಟಿದೆ.

ಆ ಮೂಲಕ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಸಾಧನೆಯನ್ನೇ ರೋಹಿತ್ ಮೀರಿಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಮೊದಲ ಕಪ್ತಾನ ಎನಿಸಿದ್ದಾರೆ.

ರೋಹಿತ್ ಮುಂದಾಳತ್ವದಲ್ಲಿ 2024ರ ಟ್ವೆಂಟಿ-20 ವಿಶ್ವಕಪ್ ಭಾರತ ಜಯಿಸಿತ್ತು. ಆದರೆ 2023ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಹಾಗೂ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಸೋಲನುಭವಿಸಿತ್ತು. ಈ ಎರಡೂ ಸಂದರ್ಭದಲ್ಲೂ ಆಸ್ಟ್ರೇಲಿಯಾ ವಿರುದ್ಧ ಫೈನಲ್ನಲ್ಲಿ ಸೋಲನುಭವಿಸಿದ್ದ ಭಾರತ ರನ್ನರ್-ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.

ಧೋನಿ ನಾಯಕತ್ವದಲ್ಲಿ ಭಾರತ 2007ರ ಟ್ವೆಂಟಿ-20 ವಿಶ್ವಕಪ್, 2011ರ ಏಕದಿನ ವಿಶ್ವಕಪ್ ಮತ್ತು 2013ರ ಚಾಂಪಿಯನ್ಸ್ ಟ್ರೋಫಿ ಜಯಿಸಿತ್ತು.

ಚಾಂಪಿಯನ್ಸ್ ಟ್ರೋಫಿಯಲ್ಲಿ ಅಜೇಯವಾಗಿ ಫೈನಲ್ಗೆ ಲಗ್ಗೆ ಇಟ್ಟಿರುವ ಟೀಮ್ ಇಂಡಿಯಾ, ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ. ಒಟ್ಟಾರೆಯಾಗಿ ಐದನೇ ಸಲ ಚಾಂಪಿಯನ್ಸ್ ಟ್ರೋಫಿ ಫೈನಲ್ಗೆ ಲಗ್ಗೆ ಇಟ್ಟಿದೆ. 2002 ಹಾಗೂ 2013ರಲ್ಲಿ ಭಾರತ ಚಾಂಪಿಯನ್ ಆಗಿತ್ತು.
.Champions Trophy: ಕೊಹ್ಲಿ ಚೆಂದದ ಆಟ; ಆಸೀಸ್ ಮಣಿಸಿದ ಭಾರತ ಫೈನಲ್ಗೆ ಲಗ್ಗೆ.Most Catches In ODIs: ರಿಕಿ ಪಾಂಟಿಂಗ್ ದಾಖಲೆ ಮುರಿದ ವಿರಾಟ್ ಕೊಹ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.