ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

400 ಸಿಕ್ಸರ್ ಸಿಡಿಸಿದವರ ಪಟ್ಟಿ ಸೇರಲು ರೋಹಿತ್ ಶರ್ಮಾಗೆ ಬೇಕು ಇನ್ನೊಂದು ಸಿಕ್ಸ್‌

Last Updated 4 ಡಿಸೆಂಬರ್ 2019, 12:49 IST
ಅಕ್ಷರ ಗಾತ್ರ

ನವದೆಹಲಿ: ಭಾರತ ತಂಡದ ಸ್ಫೋಟಕ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇನ್ನು ಒಂದೇ ಒಂದು ಸಿಕ್ಸರ್‌ ಸಿಡಿಸಿದರೆ 400 ಸಿಕ್ಸರ್‌ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಗೆ ಸೇರಿಕೊಳ್ಳಲಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್‌ ಎನಿಸಿಕೊಳ್ಳಲು ಸಜ್ಜಾಗಿದ್ದಾರೆ.

ಡಿಸೆಂಬರ್‌ 6 ರಿಂದ ಆರಂಭವಾಗುವ ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಸರಣಿಯಲ್ಲಿ ಈ ಸಾಧನೆ ಮಾಡುವ ನಿರೀಕ್ಷೆ ಇದೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿಹೆಚ್ಚು ಸಿಕ್ಸರ್‌ ಸಿಡಿಸಿದ ದಾಖಲೆ ವೆಸ್ಟ್ಇಂಡೀಸ್‌ನ ಕ್ರಿಸ್‌ ಗೇಲ್‌ ಹೆಸರಿನಲ್ಲಿದೆ. ಅವರು 534 ಸಿಕ್ಸರ್‌ ಸಿಡಿಸಿದ್ದಾರೆ. ನಂತರದ ಸ್ಥಾನದಲ್ಲಿ ಪಾಕಿಸ್ತಾನದ ಶಾಹಿದ್‌ ಅಫ್ರಿದಿ(476) ಇದ್ದಾರೆ.

ಗೇಲ್‌ ಏಕದಿನ ಕ್ರಿಕೆಟ್‌ನಲ್ಲಿ 331, ಟೆಸ್ಟ್‌ ಕ್ರಿಕೆಟ್‌ನಲ್ಲಿ 98 ಹಾಗೂ ಟಿ20ಯಲ್ಲಿ 105 ಸಿಕ್ಸರ್‌ ಸಿಡಿಸಿದ್ದಾರೆ.

351 ಸಿಕ್ಸರ್‌ ಸಿಡಿಸಿ ಏಕದಿನ ಕ್ರಿಕೆಟ್‌ನಲ್ಲಿ ಹೆಚ್ಚು ಸಿಕ್ಸರ್‌ ಗಳಿಸಿದ ಆಟಗಾರ ಎನಿಸಿರುವ ಅಫ್ರಿದಿ ಟೆಸ್ಟ್‌ ಹಾಗೂ ಟಿ20ಯಲ್ಲಿ ಕ್ರಮವಾಗಿ 52 ಮತ್ತು 73 ಸಿಕ್ಸರ್‌ ಬಾರಿಸಿದ್ದಾರೆ.

ಟಿ20 ಯಲ್ಲಿ 115 ಸಿಕ್ಸರ್‌ ಸಿಡಿಸಿ ಮೊದಲ ಸ್ಥಾನದಲ್ಲಿರುವ ರೋಹಿತ್‌ ಶರ್ಮಾ, ಏಕದಿನ ಹಾಗೂ ಟೆಸ್ಟ್‌ ಕ್ರಿಕೆಟ್‌ನಲ್ಲಿ ಕ್ರಮವಾಗಿ 232 ಹಾಗೂ 52 ಸಿಕ್ಸರ್‌ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT