ಅಹಮದಬಾದ್: ಅಕ್ಟೋಬರ್ 19ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ಪ್ರವಾಸಕ್ಕೆ 15 ಸದಸ್ಯರ ತಂಡವನ್ನು ಟೀಂ ಇಂಡಿಯಾ ಆಯ್ಕೆ ಸಮಿತಿ ಘೋಷಣೆ ಮಾಡಿದೆ. ಅಚ್ಚರಿ ಎಂಬಂತೆ ಏಕದಿನ ತಂಡದ ನಾಯಕರಾಗಿದ್ದ ಹಿಟ್ಮ್ಯಾನ್ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಅವರ ಜಾಗಕ್ಕೆ ಯುವ ಆಟಗಾರ ಶುಭಮನ್ ಗಿಲ್ ಅವರನ್ನು ನೇಮಕ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಪಷ್ಟನೆ ನೀಡಿದ್ದಾರೆ.

ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮಾತನಾಡಿ, ‘ಮೂರು ಮಾದರಿಗಳಿಗೆ ಮೂವರು ನಾಯಕರನ್ನು ಹೊಂದುವುದು ಕಷ್ಟ. ಸದ್ಯಕ್ಕೆ ಏಕದಿನ ಮಾದರಿಯ ಪಂದ್ಯಗಳು ಕೂಡ ಕಡಿಮೆ ಇವೆ. ನಮ್ಮ ಸಂಪೂರ್ಣ ಗಮನ ಮುಂಬರುವ ವಿಶ್ವಕಪ್ ಮೇಲಿದೆ. ಹೀಗಾಗಿ, ಭವಿಷ್ಯದ ನಾಯಕನನ್ನು ರೂಪಿಸುವ ನಿಟ್ಟಿನಲ್ಲಿ ಶುಭಮನ್ ಗಿಲ್ಗೆ ಜವಾಬ್ದಾರಿ ನೀಡಿ, ಅವರಿಗೆ ಹೊಂದಿಕೊಳ್ಳಲು ಸಾಕಷ್ಟು ಸಮಯ ನೀಡುವುದು ನಮ್ಮ ಉದ್ದೇಶ‘ ಎಂದು ಸ್ಪಷ್ಟಪಡಿಸಿದ್ದಾರೆ.

ನಾಯಕತ್ವ ಬದಲಾವಣೆಯ ಬಗ್ಗೆ ರೋಹಿತ್ ಅವರಿಗೆ ತಿಳಿಸಲಾಗಿದೆ ಎಂದು ಅಗರ್ಕರ್ ಸ್ಪಷ್ಟಪಡಿಸಿದರು. ಕೊಹ್ಲಿ ಮತ್ತು ರೋಹಿತ್ ಇಬ್ಬರೂ 2027ರ ಏಕದಿನ ವಿಶ್ವಕಪ್ನಲ್ಲಿ ಆಡುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಹೌದು. ನನ್ನ ಪ್ರಕಾರ 2027ರ ಏಕದಿನ ವಿಶ್ವಕಪ್ ಆಡುತ್ತಾರೆ. ಅದೇ ಕಾರಣಕ್ಕೆ ಅವರನ್ನು ಅಯ್ಕೆ ಮಾಡಲಾಗಿದೆ. ಆದರೆ, ನಾವು ಇಂದು ಅದರ ಬಗ್ಗೆ ಮಾತನಾಡುವ ಅಗತ್ಯವಿಲ್ಲ ಎಂದರು.

ಇಂದಿನ ಆಯ್ಕೆ 2027ರ ವಿಶ್ವಕಪ್ ಯೋಜನೆಯ ಒಂದು ದೊಡ್ಡ ಭಾಗವಾಗಿದೆ ಮತ್ತು ಗಿಲ್ ಅವರಿಗೆ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲು ಸಮಯ ನೀಡಬೇಕು. ಹಾಗಾಗಿ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಅಗರ್ಕರ್ ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.