ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಸ್ಟ್​ ನಾಯಕತ್ವಕ್ಕೆ ವಿದಾಯ: ಕೊಹ್ಲಿ ನಿರ್ಧಾರ ಆಘಾತ ತರಿಸಿದೆ ಎಂದ ರೋಹಿತ್

Last Updated 16 ಜನವರಿ 2022, 10:58 IST
ಅಕ್ಷರ ಗಾತ್ರ

ನವದೆಹಲಿ: ‘ಭಾರತ ಟೆಸ್ಟ್‌ ಕ್ರಿಕೆಟ್‌ ತಂಡದ ನಾಯಕತ್ವ ಸ್ಥಾನಕ್ಕೆ ವಿದಾಯ ಘೋಷಿಸಿದ ವಿರಾಟ್ ಕೊಹ್ಲಿ ಅವರ ನಿರ್ಧಾರ ನನಗೆ ಆಘಾತ ತರಿಸಿದೆ’ ಎಂದು ಏಕದಿನ ಕ್ರಿಕೆಟ್ ತಂಡದ ನಾಯಕ ರೋಹಿತ್‌ ಶರ್ಮಾ ಹೇಳಿದ್ದಾರೆ.

ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಅವರು, ‘ಆಘಾತವಾಗಿದೆ!! ಆದರೆ, ಭಾರತ ತಂಡ ನಾಯಕನಾಗಿ ಯಶಸ್ವಿ ಪ್ರದರ್ಶನ ನೀಡಿದ ನಿಮಗೆ ಅಭಿನಂದನೆಗಳು. ಉತ್ತಮ ಭವಿಷ್ಯಕ್ಕಾಗಿ ಶುಭ ಹಾರೈಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ನೆಲದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆಲುವು ದಾಖಲಿಸುವ ಸುವರ್ಣಾವಕಾಶವನ್ನು ಕಳೆದುಕೊಂಡ ಬಳಿಕ ವಿರಾಟ್ ಕೊಹ್ಲಿ ಶನಿವಾರ ನಾಯಕತ್ವ ತ್ಯಜಿಸುವುದಾಗಿ ಪ್ರಕಟಿಸಿದ್ದಾರೆ.

ವಿರಾಟ್‌ ಕೊಹ್ಲಿ ಅವರು 68 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. 40 ಪಂದ್ಯಗಳಲ್ಲಿ ಭಾರತ ತಂಡವು ಗೆಲುವು ಸಾಧಿಸಿತ್ತು. 17 ಟೆಸ್ಟ್‌ಗಳಲ್ಲಿ ಪರಾಭವಗೊಂಡಿದ್ದು, 11 ಪಂದ್ಯಗಳು ಡ್ರಾನಲ್ಲಿ ಕೊನೆಗೊಂಡಿದ್ದವು.

33 ವರ್ಷದ ವಿರಾಟ್‌ ಕೊಹ್ಲಿ ಎರಡು ತಿಂಗಳ ಹಿಂದೆ ಟಿ–20 ನಾಯಕತ್ವ ತ್ಯಜಿಸಿದ್ದರು. ಇದಾದ ಬಳಿಕ ಏಕದಿನ ತಂಡದ ನಾಯಕತ್ವದಿಂದ ಬಿಸಿಸಿಐ ಅವರನ್ನು ಕೆಳಗಿಳಿಸಿತ್ತು.

ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ರೋಹಿತ್‌ ಶರ್ಮಾ, ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯಿಂದ ಹೊರಗುಳಿದಿದ್ದರು.

ಸದ್ಯ ಕೊಹ್ಲಿ ನಾಯಕತ್ವ ತ್ಯಜಿಸಿರುವುದರಿಂದ ರೋಹಿತ್‌ ಶರ್ಮಾ ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT