ಮುಂಬೈ: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಕೊನೆಯ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿತ್ತು.
ಇದನ್ನು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಅಲ್ಲಗಳೆದಿದ್ದಾರೆ. ಫಿಟ್ ಆಗಿರುವ ಧೋನಿ ಇನ್ನೂ ಕೆಲವು ವರ್ಷ ಆಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.
41 ವರ್ಷದ ಧೋನಿ, ಈ ಹಿಂದೆ ತವರಿನ ಅಂಗಣದಲ್ಲಿ ಅಭಿಮಾನಿಗಳ ಮುಂದೆ ಆಡುವುದಾಗಿ ಹೇಳಿದ್ದರು. ಇದರಿಂದಾಗಿ ಈ ಆವೃತ್ತಿಯ ಬಳಿಕ ಧೋನಿ ನಿವೃತ್ತಿಯಾಗಲಿದ್ದಾರೆ ಎಂದು ವರದಿಯಾಗಿತ್ತು.
ಇದು ಎಂ.ಎಸ್ ಧೋನಿಯ ಕೊನೆಯ ಸೀಸನ್ ಆಗಿರಲಿದೆ ಎಂದು ಕಳೆದ ಎರಡು ಮೂರು ವರ್ಷಗಳಿಂದ ಕೇಳಿ ಬರುತ್ತಿದ್ದೇನೆ. ಆದರೆ ಅವರು ಇನ್ನೂ ಕೆಲವು ವರ್ಷ ಆಡಲು ಫಿಟ್ ಆಗಿದ್ದಾರೆ ಎಂದು ನಾನು ನಂಬುತ್ತೇನೆ ಎಂದು ರೋಹಿತ್ ಪ್ರತಿಕ್ರಿಯಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.