ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯುವ ಸವಾಲು: ರೋಹಿತ್ ಶರ್ಮಾ

Last Updated 24 ಸೆಪ್ಟೆಂಬರ್ 2020, 14:43 IST
ಅಕ್ಷರ ಗಾತ್ರ

ಅಬುಧಾಬಿ: ಇಲ್ಲಿನ ವಿಷಮ ಪರಿಸ್ಥಿತಿಯಲ್ಲಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ತಳವೂರಿ ಬ್ಯಾಟಿಂಗ್ ಮಾಡುವುದು ತುಂಬ ಕಷ್ಟ. ಇಲ್ಲಿ ಬೇಗ ಆಯಾಸ ಅನುಭವವಾಗುತ್ತದೆ ಎಂದು ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅಭಿಪ್ರಾಯಪಟ್ಟರು.

ಬುಧವಾರ ರಾತ್ರಿ ಇಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ 49 ರನ್‌ಗಳ ಗೆಲುವು ಸಾಧಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಐದು ವಿಕೆಟ್ ಕಳೆದುಕೊಂಡು 195 ರನ್ ಗಳಿಸಿತ್ತು. ಇನಿಂಗ್ಸ್ ಆರಂಭಿಸಿದ್ದ ರೋಹಿತ್ 18ನೇ ಓವರ್‌ನ ಐದನೇ ಎಸೆತದ ವರೆಗೆ ಕ್ರೀಸ್‌ನಲ್ಲಿದ್ದರು. 54 ಎಸೆತಗಳಲ್ಲಿ ಅವರು 80 ರನ್ ಗಳಿಸಿದ್ದ ಅವರು ಆರು ಸಿಕ್ಸರ್ ಮತ್ತು ಮೂರು ಬೌಂಡರಿ ಸಿಡಿಸಿದ್ದರು.

‘ಈ ಹಿಂದೆಯೂ ಇಲ್ಲಿ ಇಂಥ ಪರಿಸ್ಥಿತಿಯನ್ನು ನೋಡಿದ್ದೇನೆ. ಆರು ತಿಂಗಳಿಂದ ಸ್ಪರ್ಧಾತ್ಮಕ ಕ್ರಿಕೆಟ್ ಆಡಲಿಲ್ಲ. ಮೊದಲ ಪಂದ್ಯದಲ್ಲಿ ನಿರೀಕ್ಷೆಗೆ ತಕ್ಕಂತೆ ಆಡಲು ಆಗಲಿಲ್ಲ. ಎರಡನೇ ಪಂದ್ಯದಲ್ಲಿ ಹೆಚ್ಚುಹೊತ್ತು ಕ್ರೀಸ್‌ನಲ್ಲಿ ಉಳಿಯಲು ಸಾಧ್ಯವಾದದ್ದು ಖುಷಿ ನೀಡಿದೆ’ ಎಂದು ಅವರು ಹೇಳಿದರು.

ಮುಂಬೈ ತಂಡ ಎಂಟು ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತ್ತು. ರೋಹಿತ್ ಮತ್ತು ಸೂರ್ಯಕುಮಾರ್ ಯಾದವ್ ಎರಡನೇ ವಿಕೆಟ್‌ಗೆ 90 ರನ್‌ಗಳ ಜೊತೆಯಾಟವಾಡಿದರು. ಇದು ಸ್ಪರ್ಧಾತ್ಮಕ ಮೊತ್ತ ಗಳಿಸಲು ತಂಡಕ್ಕೆ ನೆರವಾಗಿತ್ತು.

ಗುರಿ ಬೆನ್ನತ್ತಿದ ಕೋಲ್ಕತ್ತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ಕಳೆದುಕೊಂಡು 146 ರನ್‌ ಗಳಿಸಿತ್ತು. ನಾಯಕ ದಿನೇಶ್ ಕಾರ್ತಿಕ್ (30; 23 ಎಸೆತ, 5 ಬೌಂಡರಿ) ಮತ್ತು ನಿತೀಶ್ ರಾಣಾ (24; 18 ಎ) ನಡುವಿನ 46 ರನ್‌ಗಳ ಜೊತೆಯಾಟ ಮತ್ತು ಅಂತಿಮ ಓವರ್‌ಗಳಲ್ಲಿ ಪ್ಯಾಟ್ ಕಮಿನ್ಸ್ (33; 12 ಎ, 4 ಸಿ, 1 ಬೌಂ) ಅವರ ಸ್ಫೋಟಕ ಬ್ಯಾಟಿಂಗ್ ಬಿಟ್ಟರೆ ಉಳಿದಂತೆ ತಂಡ ಗಮನ ಸೆಳೆಯುವ ಆಟವಾಡಲಿಲ್ಲ. ವೇಗಿಗಳಾದ ಟ್ರೆಂಟ್ ಬೌಲ್ಟ್‌, ಜೇಮ್ಸ್ ಪ್ಯಾಟಿನ್ಸನ್, ಜಸ್‌ಪ್ರೀತ್ ಬೂಮ್ರಾ ಮತ್ತು ಸ್ಪಿನ್ನರ್‌ ರಾಹುಲ್ ಚಾಹರ್ ತಲಾ ಎರಡು ವಿಕೆಟ್ ಕಬಳಿಸಿ ಮಿಂಚಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT