ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL: ಪಂದ್ಯದ ವೇಳೆ ಪಿಚ್‌ಗೆ ನುಗ್ಗಿದ ಅಭಿಮಾನಿ ಕಂಡು ಬೆಚ್ಚಿದ ಹಿಟ್‌ ಮ್ಯಾನ್‌!

Published 2 ಏಪ್ರಿಲ್ 2024, 2:50 IST
Last Updated 2 ಏಪ್ರಿಲ್ 2024, 2:50 IST
ಅಕ್ಷರ ಗಾತ್ರ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್‌ ಪಂದ್ಯ ವೇಳೆ ಅಹಿತಕರ ಘಟನೆಯೊಂದು ನಡೆದಿದೆ. ಮುಂಬೈ ತಂಡ ಬೌಲಿಂಗ್ ನಡೆಸುತ್ತಿರುವ ವೇಳೆ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದು, ಅಭಿಮಾನಿ ಕಂಡು ಹಿಟ್‌ ಮ್ಯಾನ್‌ ಹೌಹಾರಿದ್ದಾರೆ.

ಬಿಳಿ ಟೀ ಶರ್ಟ್‌, ನೀಲಿ ಜೀನ್ಸ್‌ ಧರಿಸಿದ್ದ ವ್ಯಕ್ತಿಯೊಬ್ಬ ಭದ್ರತಾ ನಿಯಮ ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿದ್ದು, ನೇರವಾಗಿ ರೋಹಿತ್ ಶರ್ಮಾ ಕಡೆಗೆ ಹೋಗಿದ್ದಾನೆ. ಏಕಾಏಕಿ ಪಿಚ್‌ ಒಳಗೆ ಬಂದ ಅಭಿಮಾನಿ ಕಂಡು ಬೆದರಿದ ರೋಹಿತ್, ಒಂದು ಹೆಜ್ಜೆ ಹಿಂದಕ್ಕೆ ಹೋಗಿದ್ದಾರೆ. ನಂತರ ಆತನನ್ನು ತಬ್ಬಿಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಐಪಿಎಲ್‌ನ ಈ ಆವೃತ್ತಿಯಲ್ಲಿ ಭದ್ರತಾ ನಿಯಮ ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿದ ಎರಡನೇ ಪ್ರಕರಣ ಇದಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು– ಪಂಜಾಬ್ ಕಿಂಗ್ಸ್‌ ನಡುವಿನ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದ. ಆತನನ್ನು ಹೊರಗೆ ಕರೆದುಕೊಂಡು ಬಂದು ಭದ್ರತಾ ಸಿಬ್ಬಂದಿ ಥಳಿಸಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

ನಿನ್ನೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಮುಂಬೈ ಇಂಡಿಯನ್ಸ್‌ ತಂಡಕ್ಕೆ ಬೌಲ್ಟ್‌ ಬಿಗು ದಾಳಿಯ ಮೂಲಕ ಆಘಾತ ನೀಡಿದರು. ನಂತರ ಚಾಹಲ್ ಕೂಡ ಪೆಟ್ಟು ಕೊಟ್ಟರು. ಇದರಿಂದಾಗಿ ಮುಂಬೈ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗೆ 125 ರನ್ ಗಳಿಸಲಷ್ಟೇ ಶಕ್ತವಾಯಿತು. ಗುರಿ ಬೆನ್ನಟ್ಟಿದ ರಾಜಸ್ಥಾನ ತಂಡವು 15.3 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 127 ರನ್ ಗಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT