ಶನಿವಾರ, ಜನವರಿ 23, 2021
18 °C

ಆಸ್ಟ್ರೇಲಿಯಾಗೆ ತೆರಳಿದ ರೋಹಿತ್ ಶರ್ಮಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ/ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಆಟಗಾರ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾಕ್ಕೆ ಮಂಗಳವಾರ ಪ್ರಯಾಣ ಬೆಳೆಸಿದರು.

ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಆಡುತ್ತಿರುವ ಭಾರತ ತಂಡವನ್ನು ಅವರು ಸೇರಿಕೊಳ್ಳಲಿದ್ದಾರೆ. ಆದರೆ ಅಲ್ಲಿಯ ಕೊರೊನಾ ವೈರಸ್ ತಡೆ ನಿಯಮದ ಪ್ರಕಾರ ಅವರು ಬುಧವಾರದಿಂದ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ. ಆದ್ದರಿಂದ ಗುರುವಾರದಿಂದ ಆರಂಭವಾಗುವ ಮೊದಲ ಟೆಸ್ಟ್‌ನಲ್ಲಿ ಆಡುವ ಅವಕಾಶ ಅವರಿಗಿಲ್ಲ.

’ರೋಹಿತ್ ಅವರು ದುಬೈ ಮಾರ್ಗವಾಗಿ ಆಸ್ಟ್ರೇಲಿಯಾಕ್ಕೆ ತೆರಳಿದರು. ಅವರು ಸಂಪೂರ್ಣ ಫಿಟ್ ಆಗಿದ್ದು ಕ್ವಾರಂಟೈನ್ ನಂತರ ತಂಡಕ್ಕೆ ಸೇರ್ಪಡೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು‘ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಹೋದ ತಿಂಗಳು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸಂದರ್ಭದಲ್ಲಿ ರೋಹಿತ್ ಗಾಯಗೊಂಡಿದ್ದರು. ಟೂರ್ನಿಯ ನಂತರ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಭಾಗವಹಿಸಿದ್ದರು. ಈಚೆಗಷ್ಟೇ ನಡೆದಿದ್ದ ಫಿಟ್‌ನೆಸ್ಟ್‌ ಟೆಸ್ಟ್‌ನಲ್ಲಿ ಉತ್ತೀರ್ಣರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು