ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ20 ಕ್ರಿಕೆಟ್‌ನಿಂದ ದೂರ ಉಳಿಯಲು ರೋಹಿತ್ ನಿರ್ಧಾರ

Published 23 ನವೆಂಬರ್ 2023, 0:35 IST
Last Updated 23 ನವೆಂಬರ್ 2023, 0:35 IST
ಅಕ್ಷರ ಗಾತ್ರ

ನವದೆಹಲಿ: ಏಕದಿನ ಮತ್ತು ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕರಾಗಿರುವ ರೋಹಿತ್ ಶರ್ಮಾ ಅವರು ಮುಂಬರುವ ದಿನಗಳಲ್ಲಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ.

2022ರ ನವೆಂಬರ್‌ನಲ್ಲಿ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ತಂಡವು ಸೋತಿತ್ತು. ಆಗಿನಿಂದ ಇದುವರೆಗೆ ಅವರು ಚುಟುಕು ಮಾದರಿಯಲ್ಲಿ ಆಡಿಲ್ಲ.

36 ವರ್ಷದ ರೋಹಿತ್ ಅವರು 148 ಚುಟುಕು ಪಂದ್ಯಗಳನ್ನು ಆಡಿದ್ದಾರೆ. 3853 ರನ್ ಗಳಿಸಿದ್ದಾರೆ. ನಾಲ್ಕು ಶತಕಗಳು ಅದರಲ್ಲಿ ಸೇರಿವೆ. 140ರ ಸ್ಟ್ರೈಕ್‌ರೇಟ್ ಹೊಂದಿದ್ದಾರೆ.

‘ಇದೇನೂ ಹೊಸ ಬೆಳವಣಿಗೆ ಅಲ್ಲ. ಕಳೆದ ಒಂದು ವರ್ಷದಿಂದ ಅವರು ಟಿ20 ಕ್ರಿಕೆಟ್ ಆಡಿಲ್ಲ. ಅವರು ಏಕದಿನ ವಿಶ್ವಕಪ್ ಟೂರ್ನಿಯ ಮೇಲೆ ಹೆಚ್ಚು ಗಮನ ಕೇಂದ್ರಿಕರಿಸಿದ್ದರು. ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರಕರ್ ಅವರೊಂದಿಗೆ ಈ ಕುರಿತು ಸುದೀರ್ಘ ಚರ್ಚೆ ನಡೆಸಿದ್ದರು. ಟಿ20ಯಿಂದ ದೂರವಿರುವ ನಿರ್ಧಾರವನ್ನು ತಿಳಿಸಿದ್ದಾರೆ. ಇದು ಅವರದ್ದೇ ನಿರ್ಧಾರವಾಗಿದೆ’ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ.

ರೋಹಿತ್ ಜಾಗದಲ್ಲಿ ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ ಮತ್ತು ಋತುರಾಜ್ ಗಾಯಕವಾಡ್ ಅವರು ಆರಂಭಿಕ ಬ್ಯಾಟರ್‌ಗಳಾಗಲು ಸ್ಪರ್ಧೆಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT