ಸೋಮವಾರ, ಜೂಲೈ 6, 2020
24 °C

ಮೊದಲ ಟೆಸ್ಟ್‌ಗೆ ರೂಟ್‌ ಅಲಭ್ಯ?

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌ ಅವರು ವೆಸ್ಟ್‌ ಇಂಡೀಸ್‌ ಎದುರಿನ ಮೊದಲ ಟೆಸ್ಟ್‌ ಕ್ರಿಕೆಟ್‌ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ. 

ವಿಂಡೀಸ್‌ ಎದುರಿನ ಮೊದಲ ಟೆಸ್ಟ್‌ ಜುಲೈ 8ರಿಂದ ಸೌತಾಂಪ್ಟನ್‌ನ ಏಜಿಸ್‌ ಬೌಲ್‌ ಮೈದಾನದಲ್ಲಿ ನಡೆಯಲಿದೆ.

ರೂಟ್‌ ದಂಪತಿಯು ಎರಡನೇ ಮಗುವಿನ ನಿರೀಕ್ಷೆಯಲ್ಲಿದೆ. ಹೆರಿಗೆ ಸಮಯದಲ್ಲಿ ಪತ್ನಿ ಜೊತೆ ಇರಲು ರೂಟ್‌ ಬಯಸಿದ್ದಾರೆ ಎನ್ನಲಾಗಿದೆ. 

ಮನೆಯಿಂದ ಹಿಂತಿರುಗಿದ ಬಳಿಕ ರೂಟ್‌ ಅವರು ಏಳು ದಿನಗಳ ಪ್ರತ್ಯೇಕವಾಸದಲ್ಲಿರಬೇಕಾಗುತ್ತದೆ. ಹೀಗಾಗಿ ಎರಡನೇ ಟೆಸ್ಟ್‌ನಲ್ಲೂ ಅವರು ಆಡುವುದು ಅನುಮಾನ ಎನ್ನಲಾಗಿದೆ.

ರೂಟ್‌ ಅಲಭ್ಯರಾದರೆ, ಅವರ ಬದಲು ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ ಅವರು ಮೊದಲ ಬಾರಿಗೆ ತಂಡವನ್ನು ಮುನ್ನಡೆಸಲಿದ್ದಾರೆ.

‘ಸ್ಟೋಕ್ಸ್‌ ಅವರಲ್ಲಿ ನಾಯಕತ್ವದ ಗುಣಗಳಿವೆ. ತಂಡವನ್ನು ಮುನ್ನಡೆಸಲು ಅವರು ಸಮರ್ಥರಾಗಿದ್ದಾರೆ’ ಎಂದು ರೂಟ್‌ ಅವರು ಸ್ಟೋಕ್ಸ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೂರು ಪಂದ್ಯಗಳ ಈ ಟೆಸ್ಟ್‌ ಸರಣಿಯನ್ನು ‘ಜೀವ ಸುರಕ್ಷಾ’ (ಬಯೋ ಸೆಕ್ಯುರ್‌) ವಾತಾವರಣದಲ್ಲಿ ಆಯೋಜಿಸುವುದಾಗಿ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ಹೇಳಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು