ನವದೆಹಲಿ: 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನ ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯ ತರಬೇತುದಾರರಾಗಿ ಶ್ರೀಲಂಕಾದ ಮಾಜಿ ಆಟಗಾರ ಕುಮಾರ ಸಂಗಕ್ಕಾರ ಅವರನ್ನು ನೇಮಕ ಮಾಡಿದೆ.

2025ನೇ ಆವೃತಿಯಲ್ಲಿ ತಂಡದ ಮುಖ್ಯ ಕೋಚ್ ಆಗಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಅವರು ಈ ವರ್ಷದ ಆಗಸ್ಟ್ನಲ್ಲಿ ಫ್ರಾಂಚೈಸಿಯನ್ನು ತೊರೆದಿದ್ದರು. ಈ ಹಿನ್ನೆಲೆಯಲ್ಲಿ 2021 ರಿಂದ 24ರ ಅವಧಿಯಲ್ಲಿ ತಂಡದ ಹೆಡ್ ಕೋಚ್ ಆಗಿ ಜವಾಬ್ದಾರಿ ನಿಭಾಯಿಸಿದ್ದ ಕುಮಾರ ಸಂಗಕ್ಕಾರ ಅವರನ್ನು ಮರಳಿ ಅದೇ ಸ್ಥಾನಕ್ಕೆ ನೇಮಕ ಮಾಡಿದ್ದಾರೆ.

ಸಂಗಕ್ಕಾರ ನೇಮಕಾತಿ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಜಸ್ಥಾನ ರಾಯಲ್ಸ್ ‘ಕ್ರಿಕೆಟ್ ನಿರ್ದೇಶಕರಾಗಿರುವ ಕುಮಾರ್ ಸಂಗಕ್ಕಾರ ಐಪಿಎಲ್ 2026 ರಲ್ಲಿ ರಾಜಸ್ಥಾನ ರಾಯಲ್ಸ್ನ ಮುಖ್ಯ ತರಬೇತುದಾರರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ’ ತಿಳಿಸಿದೆ.

ಕನ್ನಡಿಗ ರಾಹುಲ್ ದ್ರಾವಿಡ್ ಅವರು, ಹಲವು ವರ್ಷಗಳ ಒಪ್ಪಂದದ ಮೇರೆಗೆ ಕಳೆದ ಐಪಿಎಲ್ ಆವೃತಿಯಲ್ಲಿ ರಾಜಸ್ಥಾನ ತಂಡದ ಮುಖ್ಯ ತರಬೇತುದಾರರಾಗಿ ನೇಮಕಗೊಂಡಿದ್ದರು. ಆದರೆ, ತಂಡ ನಿರೀಕ್ಷಿತ ಪ್ರದರ್ಶನ ತೋರದ ಹಿನ್ನೆಲೆ ಅವರು ತಮ್ಮ ಸ್ಥಾನವನ್ನು ತೊರೆದಿದ್ದರು.

2025ರಲ್ಲಿ ರಾಜಸ್ಥಾನ ತಂಡ ಆಡಿರುವ 14 ಪಂದ್ಯಗಳಲ್ಲಿ 4ರಲ್ಲಿ ಮಾತ್ರ ಗೆದ್ದು 9ನೇ ಸ್ಥಾನದಲ್ಲಿ ಟೂರ್ನಿಯನ್ನು ಕೊನೆಗೊಳಿಸುತ್ತು. ಈ ಹಿನ್ನೆಲೆಯಲ್ಲಿ ತಂಡದಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಂಡಿದೆ.

ಅದರಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಸಿಎಸ್ಕೆಗೆ ಬಿಟ್ಟುಕೊಟ್ಟು ರವೀಂದ್ರ ಜಡೇಜ ಮತ್ತು ಸ್ಯಾಮ್ ಕರನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದು ಸೇರಿದೆ.

ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆಯಲಿರುವ ಮಿನಿ ಹರಾಜಿಗೂ ಮುನ್ನ ಆರ್ಆರ್ ಫ್ರಾಂಚೈಸಿ ಮೂವರು ವಿದೇಶಿ ಆಟಗಾರರು ಸೇರಿದಂತೆ ಒಟ್ಟು 7 ಆಟಗಾರರನ್ನು ಬಿಡುಗಡೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.