ಚೆನ್ನೈ: ಇಲ್ಲಿ ನಡೆದ ಐಪಿಎಲ್ ಲೀನ್ನ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಇದೀಗ ಗೆಲುವಿನ ಬೆನ್ನಲ್ಲೇ ನಾಯಕ ಋತುರಾಜ್ ಗಾಯಕವಾಡ್ ಅವರಿಗೆ ಭಾರಿ ದಂಡವನ್ನು ಹಾಕಲಾಗಿದೆ.

ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 23 ರನ್ಗಳಿಂದ ಗೆಲುವು ಸಾಧಿಸಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ಕೆ ನಿಗದಿತ 20 ಓವರ್ ಗಳಲ್ಲಿ 212 ರನ್ಗಳನ್ನು ಕಲೆಹಾಕಿತ್ತು. ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 10 ವಿಕೆಟ್ ಕಳೆದುಕೊಂಡು 189 ರನ್ ಗಳಿಸಲು ಮಾತ್ರ ಸಾಧ್ಯವಾಯಿತು.

ಇದೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ತಂಡದ ನಾಯಕ ಋತುರಾಜ್ ಗಾಯಕವಾಡ್ ಅವರಿಗೆ ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಯ ನಿಯಮದಂತೆ ನಾಯಕನಿಗೆ ₹12 ಲಕ್ಷ ದಂಡ ಹಾಕಲಾಗಿದೆ.

ಐಪಿಎಲ್ ನಿಯಮದ ಪ್ರಕಾರ ಒಂದು ತಂಡವು 20 ಓವರ್ಗಳನ್ನು 1 ಗಂಟೆ 30 ನಿಮಿಷದಲ್ಲಿ ಮುಗಿಸಬೇಕು. ಒಂದು ವೇಳೆ ನಿಗದಿತ ಅವಧಿಯೊಳಗೆ ಬೌಲಿಂಗ್ ಮುಗಿಸಲು ಸಾಧ್ಯವಾಗದಿದ್ದರೆ, ನಿಯಮದಂತೆ ಕೊನೆಯ ಓವರ್ನಲ್ಲಿ ಒಬ್ಬ ಆಟಗಾರನನ್ನು ಮೈದಾನದಿಂದ ಹೊರಗಿಡಲಾಗುತ್ತದೆ. ಜತೆಗೆ ನಾಯಕನಿಗೆ ₹12 ಲಕ್ಷ ದಂಡ ವಿಧಿಸಲಾಗುತ್ತದೆ. 2ನೇ ಬಾರಿ ಈ ತಪ್ಪು ಪುನರಾವರ್ತನೆಯಾದರೆ, ನಾಯಕನಿಗೆ ₹24 ಲಕ್ಷ ದಂಡ ವಿಧಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.