ಭಾರತ ಎ ಹಾಗೂ ದಕ್ಷಿಣ ಆಫ್ರಿಕಾ ಎ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲು ಎರಡು ಪಂದ್ಯದಲ್ಲಿ ಭಾರತ ಎ ತಂಡ ಗೆದ್ದು ಸರಣಿಯಲ್ಲಿ 2–0 ಮುನ್ನಡೆ ಸಾಧಿಸಿದೆ. ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ಋತುರಾಜ್ ಗಾಯಕವಾಡ ಲಿಸ್ಟ್ ಎ ಏಕದಿನ ಕ್ರಿಕೆಟ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ದಾಖಲೆ ಬರೆದ ಋತುರಾಜ್ ಗಾಯಕವಾಡ

ಋತುರಾಜ್ ಗಾಯಕವಾಡ ಅವರು ದಕ್ಷಿಣ ಆಫ್ರಿಕಾ ಎ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ (117) ಶತಕ ಬಾರಿಸಿದ್ದರು. ಮಾತ್ರವಲ್ಲ, ಎರಡನೇ ಪಂದ್ಯದಲ್ಲೂ ಆಕರ್ಷಕ ಅರ್ಧಶತಕ (ಅಜೇಯ 68) ರನ್ ಸಿಡಿಸುವ ಮೂಲಕ ಭಾರತ ಎ ಗೆಲುವಿನಲ್ಲಿ ಪ್ರಮುಕ ಪಾತ್ರ ವಹಿಸಿದರು.

ಗಾಯಕವಾಡ ದಕ್ಷಿಣ ಆಫ್ರಿಕಾ ಎ ವಿರುದ್ಧದ ಸರಣಿಗೂ ಮುನ್ನ ತಮ್ಮ ಲಿಸ್ಟ್ ಎ ಏಕದಿನ ಕ್ರಿಕೆಟ್ ವೃತ್ತಿಜೀವನದಲ್ಲಿ 56.93 ಬ್ಯಾಟಿಂಗ್ ಸರಾಸರಿ ಹೊಂದಿದ್ದರು. ಆದರೆ, ಸರಣಿಯ ಎರಡೂ ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ತೋರಿದ ಬಳಿಕ ಅವರ ಬ್ಯಾಟಿಂಗ್ ಸರಾಸರಿ 57.80ಕ್ಕೆ ಏರಿಕೆ ಕಂಡಿದೆ.

ಆ ಮೂಲಕ ಅವರು ಭಾರತ ತಂಡದ ಮಾಜಿ ಆಟಗಾರ ಚೇತೇಶ್ವರ ಪೂಜಾರ ಅವರ ಲಿಸ್ಟ್ ಎ ಏಕದಿನ ಕ್ರಿಕೆಟ್ನಲ್ಲಿನ 57.1 ಸರಾಸರಿಯನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದರು. ಈ ಸಾಲಿನಲ್ಲಿ ವಿರಾಟ್ ಕೊಹ್ಲಿ 56.66ರ ಸರಾಸರಿಯೊಂದಿಗೆ ಲಿಸ್ಟ್ ಎ ಏಕದಿನ ಕ್ರಿಕೆಟ್ನಲ್ಲಿ ಅತ್ಯುತ್ತಮ ಸರಾಸರಿ ಹೊಂದಿರುವ ಮೂರನೇ ಭಾರತೀಯ ಬ್ಯಾಟರ್ ಆಗಿದ್ದಾರೆ.

ಲಿಸ್ಟ್ ಎ ಏಕದಿನ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸರಾಸರಿ ಹೊಂದಿರುವ ವಿಶ್ವದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೂ ಗಾಯಕವಾಡ ಪಾತ್ರರಾದರು. ಆಸ್ಟ್ರೇಲಿಯಾದ ದಂತಕಥೆ ಮೈಕೆಲ್ ಬೆವನ್ ಲಿಸ್ಟ್ ಎ ವೃತ್ತಿಜೀವನದಲ್ಲಿ 57.86ರ ಸರಾಸರಿಯೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
.ಭಾರತ A ತಂಡಕ್ಕೆ ಮಣಿದ ದಕ್ಷಿಣ ಆಫ್ರಿಕಾ A: ಗಾಯಕವಾಡ್ ಮಿಂಚು; ನಿಶಾಂಕ್ ಕೈಚಳಕ.IPL Trade 2026: ಸಂಜು–ಜಡೇಜ ಸೇರಿ ಐಪಿಎಲ್ ಇತಿಹಾಸದ ಅತೀ ದೊಡ್ಡ ವಿನಿಮಯಗಳಿವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.