ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌ | ದಕ್ಷಿಣ ಆಫ್ರಿಕಾ ಪ್ರವಾಸ: ಭಾರತದ ಏಕದಿನ ತಂಡದ ನಾಯಕತ್ವ ಯಾರಿಗೆ?

Last Updated 5 ಡಿಸೆಂಬರ್ 2021, 16:35 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಲಿರುವ ಭಾರತ ತಂಡದ ಆಯ್ಕೆಯು ಇದೇ ವಾರ ನಡೆಯಲಿದೆ.

ಈ ಸಂದರ್ಭದಲ್ಲಿ ಏಕದಿನ ಕ್ರಿಕೆಟ್ ತಂಡಕ್ಕೆ ವಿರಾಟ್ ಕೊಹ್ಲಿ ಅವರನ್ನು ನಾಯಕರನ್ನಾಗಿ, ಟೆಸ್ಟ್ ತಂಡದಲ್ಲಿ ಅಜಿಂಕ್ಯ ರಹಾನೆ ಅವರನ್ನು ಉಪನಾಯಕರನ್ನಾಗಿ ಮತ್ತು ವೇಗಿ ಇಶಾಂತ್ ಶರ್ಮಾ ಅವರಿಗೆ ಸ್ಥಾನ ನೀಡುವ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ರಾಷ್ಟ್ರೀಯ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ, ಅಬೆ ಕುರುವಿಲಾ ಮತ್ತು ಸುನೀಲ್ ಜೋಶಿ ಅವರು ಮುಂಬೈ ಟೆಸ್ಟ್‌ ಪಂದ್ಯದಲ್ಲಿ ಆಟಗಾರರ ಪ್ರದರ್ಶನವನ್ನು ವೀಕ್ಷಿಸುತ್ತಿದ್ದಾರೆ. ಈ ಪಂದ್ಯ ಮುಗಿದ ನಂತರ ತಂಡದ ಆಯ್ಕೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಆಫ್ರಿಕಾದಲ್ಲಿ ಭಾರತ ತಂಡವು ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಆಡಲಿದೆ. ಈಚೆಗಷ್ಟೇ ವಿರಾಟ್ ಟಿ20 ತಂಡದ ನಾಯಕತ್ವ ಬಿಟ್ಟುಕೊಟ್ಟಿದ್ದರು. ರೋಹಿತ್ ಶರ್ಮಾ ನಾಯಕರಾಗಿ ನೇಮಕವಾಗಿದ್ದರು. ಆದ್ದರಿಂದ ಶ್ವೇತ ಚೆಂಡಿನ ಮಾದರಿಗಳ ತಂಡಕ್ಕೆ ಒಬ್ಬರನ್ನೇ ನಾಯಕರನ್ನಾಗಿ ನೇಮಕ ಮಾಡುವ ಯೋಚನೆ ಬಿಸಿಸಿಐಗೆ ಇದೆ. ಆದ್ದರಿಂದ ವಿರಾಟ್ ಅವರನ್ನು ಟೆಸ್ಟ್ ತಂಡಕ್ಕೆ ಮಾತ್ರ ನಾಯಕರನ್ನಾಗಿ ಉಳಿಸಿಕೊಳ್ಳುವ ಚಿಂತನೆ ನಡೆದಿದೆ ಎನ್ನಲಾಗಿದೆ.

ಕಳೆದ ಹಲವು ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರಿಗೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ. ಆದರೆ, ರಹಾನೆ ಅವರನ್ನು ಉಪನಾಯಕ ಸ್ಥಾನದಿಂದ ಕೆಳಗಿಳಿಸಿ, ರೋಹಿತ್‌ಗೆ ಹೊಣೆ ನೀಡುವ ಕುರಿತು ಮಾತುಗಳು ಕೇಳಿಬಂದಿವೆ.

100ಕ್ಕೂ ಹೆಚ್ಚು ಟೆಸ್ಟ್‌ಗಳನ್ನು ಆಡಿರುವ ಅನುಭವಿ ಇಶಾಂತ್ ಶರ್ಮಾ ಕೂಡ ಕೆಲವು ಪಂದ್ಯಗಳಿಂದ ಸತತ ವೈಫಲ್ಯ ಅನುಭವಿಸುತ್ತಿದ್ದಾರೆ. ಆದ್ದರಿಂದ ಅವರ ಆಯ್ಕೆಯೂ ಅನುಮಾನವಾಗಿದೆ. ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಬ್ಯಾಟರ್ ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ ಸ್ಥಾನ ಉಳಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ಮಧ್ಯಮ ಕ್ರಮಾಂಕದಲ್ಲಿ ಹನುಮವಿಹಾರಿ ಕೂಡ ಸ್ಥಾನ ಪಡೆಯುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT