ಶುಕ್ರವಾರ, ಸೆಪ್ಟೆಂಬರ್ 17, 2021
23 °C

ವಿರಾಟ್‌ ಕೊಹ್ಲಿಯ ಸತತ ವೈಫಲ್ಯದ ಬಗ್ಗೆ ಸಚಿನ್‌ ಹೇಳಿದ್ದೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತವು ಉತ್ತಮ ಪ್ರದರ್ಶನ ನೀಡಿದೆ. ಆದರೆ, ನಾಯಕ ವಿರಾಟ್‌ ಕೊಹ್ಲಿ ಅವರು ಸತತ ವೈಫಲ್ಯ ಅನುಭವಿಸುತ್ತಿರುವುದು ತಂಡವನ್ನು ಚಿಂತೆಗೀಡು ಮಾಡಿದೆ.

ಇಂಗ್ಲೆಂಡ್‌ನಲ್ಲಿ ಆಡಿದ ಕೊನೆಯ ಐದು ಇನ್ನಿಂಗ್ಸ್‌ಗಳಲ್ಲಿ, ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ 44, 13, 0, 42, ಮತ್ತು 20 ರನ್‌ಗಳನ್ನು ದಾಖಲಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್‌ ಕೊಹ್ಲಿ ಅವರು ಶತಕ ಗಳಿಸದೇ ಸುಮಾರು ಎರಡು ವರ್ಷಗಳಾಗಿವೆ.

ಈ ವಿಚಾರದ ಬಗ್ಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಕೊಹ್ಲಿಯವರ ವೈಫಲ್ಯದ ಬಗ್ಗೆ ಸುದ್ದಿಸಂಸ್ಥೆ ಪಿಟಿಐ ಜೊತೆ ಮಾತನಾಡಿದ್ದಾರೆ.

'ಇಂಗ್ಲೆಂಡ್‌ನಲ್ಲಿ ನಡೆದ ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿರಾಟ್ ಅವರ ಆರಂಭ ಉತ್ತಮವಾಗಿರಲಿಲ್ಲ. ಆರಂಭವು ಉತ್ತಮವಾಗಿಲ್ಲದಿದ್ದರೆ, ಹಲವಾರು ವಿಚಾರಗಳು ತಲೆಯಲ್ಲಿ ಓಡುತ್ತಿರುತ್ತವೆ. ಆತಂಕದ ಮಟ್ಟ ಹೆಚ್ಚಿರುತ್ತದೆ. ಆ ಸಮಯದಲ್ಲಿ ಆಟಗಾರ ಬಹಳಷ್ಟು ವಿಷಯಗಳ ಬಗ್ಗೆ ಯೋಚಿಸಲು ಪ್ರಾರಂಭಿಸುತ್ತಾನೆ. ಬ್ಯಾಟ್ಸ್‌ಮನ್ ಉತ್ತಮ ಫಾರ್ಮ್‌ನಲ್ಲಿಲ್ಲದಿದ್ದಾಗ ಪಾದಗಳೂ ಸಹ ಚಲಿಸುವುದಿಲ್ಲ. ಪ್ರತಿಯೊಬ್ಬ ಆಟಗಾರನೂ ಇದನ್ನು ಅನುಭವಿಸುತ್ತಾನೆ' ಎಂದು ಕ್ರಿಕೆಟ್‌ ದಂತಕತೆ ಸಚಿನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

'ದೇಹ ಮತ್ತು ಮನಸ್ಸುಗಳು ಸಾಮರಸ್ಯದಿಂದ ಕೆಲಸ ಮಾಡಬೇಕು. ಇದರ ಮೇಲೆ ನಮ್ಮ ಮನಸ್ಥಿತಿಯೂ ರೂಪಗೊಳ್ಳುತ್ತದೆ' ಎಂದು ಸಚಿನ್ ಹೇಳಿದ್ದಾರೆ.

ಇಂಗ್ಲೆಂಡ್ ಎದುರಿನ ಎರಡನೇ ಟೆಸ್ಟ್‌ನಲ್ಲಿ ಭಾರತ ತಂಡ 151 ರನ್‌ಗಳ ಅಮೋಘ ಗೆಲುವು ಸಾಧಿಸಿದೆ. ಲಾರ್ಡ್ಸ್‌ನಲ್ಲಿ ಭಾರತ ತಂಡಕ್ಕೆ ಇದು ಮೂರನೇ ಗೆಲುವು. 1986 ಹಾಗೂ 2014ರ ಸರಣಿಗಳಲ್ಲಿ ತಂಡಕ್ಕೆ ಗೆಲುವು ಒಲಿದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು