ಭಾನುವಾರ, ಮಾರ್ಚ್ 29, 2020
19 °C

ಮೋದಿ ನೀಡಿರುವ ಸರಳ ಟಾಸ್ಕ್ ಲಕ್ಷಾಂತರ ಜನರ ಜೀವ ಉಳಿಸಲಿದೆ: ಸಚಿನ್ ತೆಂಡೂಲ್ಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಲಾಕ್‌ಡೌನ್‌ ಕರೆಯು ಲಕ್ಷಾಂತರ ಜೀವಗಳನ್ನು ಉಳಿಸಲು ನೆರವಾಗಲಿದೆ ಎಂದು ಭಾರತ ಕ್ರಿಕೆಟ್‌ನ ಬ್ಯಾಟಿಂಗ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಹೇಳಿದ್ದಾರೆ.

ಜನರು ಮನೆಯಲ್ಲಿಯೇ ಉಳಿದುಕೊಳ್ಳಬೇಕು ಎಂದು ಮನವಿ ಮಾಡಿರುವ ಸಚಿನ್, ‘ಕೆಲವು ಸರಳ ಕೆಲಸಗಳನ್ನು ಮಾಡಲು ಕಷ್ಟವಾಗುತ್ತದೆ. ಯಾಕೆಂದರೆ ಅದಕ್ಕೆ ಶಿಸ್ತು ಮತ್ತು ದೃಢ ನಿರ್ಧಾರ ಬೇಕು’

‘ಮಾನ್ಯ ಪ್ರಧಾನಿ ಮೋದಿ ಅವರು ನಮ್ಮನ್ನು 21 ದಿನಗಳವರೆಗೆ ಮನೆಯಲ್ಲೇ ಇರುವಂತೆ ಕೇಳಿದ್ದಾರೆ. ಈ ಸರಳ ಕಾರ್ಯವು ಲಕ್ಷಾಂತರ ಜೀವಗಳನ್ನು ಉಳಿಸಲಿದೆ. ಕೋವಿಡ್‌–19 ವಿರುದ್ಧದ ಯುದ್ಧಕ್ಕಾಗಿ ಎಲ್ಲರೂ ಒಂದಾಗೋಣ’ ಎಂದು ಕರೆ ನೀಡಿದ್ದಾರೆ.

ಇದಕ್ಕೂ ಮೊದಲು ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ, ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಸೇರಿದಂತೆ ಅನೇಕರು ಮೋದಿ ನಿರ್ಧಾರವನ್ನು ಬೆಂಬಲಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು