ಭಾನುವಾರ, ಅಕ್ಟೋಬರ್ 24, 2021
21 °C

IPL 2021: ಸ್ಯಾಮ್‌ ಕರನ್‌ಗೆ ಬೆನ್ನು ನೋವು, ಟಿ–20 ವಿಶ್ವಕಪ್‌ನಿಂದ ಹೊರಕ್ಕೆ

ಪಿಟಿಐ‌ Updated:

ಅಕ್ಷರ ಗಾತ್ರ : | |

ಲಂಡನ್: ಬೆನ್ನು ನೋವಿನಿಂದ ಬಳಲುತ್ತಿರುವ ಆಲ್‌ರೌಂಡರ್ ಸ್ಯಾಮ್‌ ಕರನ್‌ ಮುಂಬರುವ ಟಿ–20 ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ ಎಂದು ಮಂಗಳವಾರ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ ತಿಳಿಸಿದೆ.

ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿರುವ ಸ್ಯಾಮ್‌ ಕರನ್‌, ಶನಿವಾರ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಗಾಯಗೊಂಡಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಅವರು ಇಂಗ್ಲೆಂಡ್‌ಗೆ ವಾಪಸಾಗಲಿದ್ದು, ಹೆಚ್ಚಿನ ವೈದ್ಯಕೀಯ ತಪಾಸಣೆಗೆ ಒಳಪಡಲಿದ್ದಾರೆ ಎಂದು ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ತಿಳಿಸಿದೆ.

23 ವರ್ಷದ ಕರನ್‌,  ಈ ಬಾರಿ ಐಪಿಎಲ್‌ ಟೂರ್ನಿಯಲ್ಲಿ ಆಡಿರುವ ಒಂಬತ್ತು ಪಂದ್ಯಗಳಲ್ಲಿ 56 ರನ್ ಗಳಿಸಿದ್ದು, ಒಂಬತ್ತು ವಿಕೆಟ್ ಪಡೆದಿದ್ದಾರೆ.

‘ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಕಳೆದ ಎರಡು ಆವೃತ್ತಿಗಳಲ್ಲಿ ನಾನು ನಿಮ್ಮ ಬೆಂಬಲವನ್ನು ಸಂಪೂರ್ಣವಾಗಿ ಇಷ್ಟಪಟ್ಟಿದ್ದೇನೆ’ ಎಂದು ಕರನ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು