ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಐ’ ಖರೀದಿಗೆ ಹೆಚ್ಚಿದ ಆಸಕ್ತಿ

Last Updated 10 ಮೇ 2018, 19:30 IST
ಅಕ್ಷರ ಗಾತ್ರ

ಮುಂಬೈ: ‘ಸರ್ಕಾರಿ ಸ್ವಾಮ್ಯದ ಏರ್‌ ಇಂಡಿಯಾ (ಎಐ) ವಿಮಾನಯಾನ ಸಂಸ್ಥೆಯ ಷೇರು ಖರೀದಿಗೆ ಹಲವು ಸಂಸ್ಥೆಗಳು ಆಸಕ್ತಿ ತೋರಿಸಿವೆ’ ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಆರ್‌.ಎನ್‌. ಚೌಬೆ ಹೇಳಿದ್ದಾರೆ.

ಏರ್‌ ಇಂಡಿಯಾ ಸಂಸ್ಥೆಯಲ್ಲಿನ ಶೇ 76 ರಷ್ಟು ಷೇರು ಖರೀದಿಗೆ ಹಲವರು ಆಸಕ್ತಿ ಹೊಂದಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ಗುರುವಾರ ಇಲ್ಲಿ ನಡೆದ ಭಾರತ–ಅಮೆರಿಕ ವಾಯುಯಾನ ಶೃಂಗ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

‘ಅಮೆರಿಕದ ಯಾವುದೇ ವಿಮಾನಯಾನ ಸಂಸ್ಥೆಯು ಏರ್‌ ಇಂಡಿಯಾ ಖರೀದಿ ಬಗ್ಗೆ ಆಸಕ್ತಿ ಹೊಂದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಷೇರು ವಿಕ್ರಯದಲ್ಲಿ ಪಾಲ್ಗೊಳ್ಳುವ ಬಗ್ಗೆ ಇಂಗಿತ ವ್ಯಕ್ತಪಡಿಸಲು ಮೇ 14 ರವರೆಗಿದ್ದ ಕಾಲಮಿತಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ.

ಅರ್ಹ ಖರೀದಿದಾರರನ್ನು ಜೂನ್‌ 15ರಂದು ಗುರುತಿಸಲು ಸಂಸ್ಥೆಯು ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT